ಕಾಲೇಜಿನ ಶೌಚಾಲಯಕ್ಕೆ ನುಗ್ಗಿ ವಿದ್ಯಾರ್ಥಿನಿಗೆ ಬೆದರಿಕೆ : ಆರೋಪಿ ಬಂಧನ

Social Share

ಬೆಂಗಳೂರು, ಜ.23- ಕಾಲೇಜಿನ ವಿದ್ಯಾರ್ಥಿನಿಯರ ಶೌಚಾಲಯಕ್ಕೆ ಅತಿಕ್ರಮವಾಗಿ ಪ್ರವೇಶಿಸಿ ವಿದ್ಯಾರ್ಥಿನಿಗೆ ಬೆದರಿಕೆ ಹಾಕಿದ್ದ ಆರೋಪಿಯೊಬ್ಬನನ್ನು ಜಯನಗರ ಠಾಣೆ ಪೊಲೀಸರು ಬಂಧಿಸಿದ್ದಾರೆ. ಹನುಮಂತ ನಗರದ 2ನೇ ಹಂತ ಸುಂಕೇನಹಳ್ಳಿ ಎಕ್ಸ್‍ಟೆನ್ಶನ್ ನಿವಾಸಿ ಅಜಯ್ ಕುಮಾರ್(42) ಬಂಧಿತ ಆರೋಪಿ.

ಈತನನ್ನು 37ನೇ ಎಸಿಎಂಎಂ ನ್ಯಾಯಾಲಯದ ನ್ಯಾಯಾೀಧಿಶರ ಗೃಹ ಕಚೇರಿಗೆ ಹಾಜರು ಪಡಿಸಿದ್ದು, ಆರೋಪಿಯು ಹಾಲಿ ನ್ಯಾಯಾಂಗ ಬಂಧನದಲ್ಲಿರುತ್ತಾನೆ.

ಜಯನಗರ 4ನೇ ಬ್ಲಾಕ್‍ನಲ್ಲಿರುವ ವಿಜಯ ಕಾಲೇಜಿಗೆ ಜ. 10ರಂದು ನುಗ್ಗಿದ ವ್ಯಕ್ತಿ ಅತಿಕ್ರಮ ಪ್ರವೇಶ ಮಾಡಿದ್ದಲ್ಲದೇ ವಿದ್ಯಾರ್ಥಿನಿಯರ ಶೌಚಾಲಯಕ್ಕೆ ಹೋಗಿದ್ದಾನೆ. ಆ ಸಂದರ್ಭದಲ್ಲಿ ಕಾಲೇಜು ವಿದ್ಯಾರ್ಥಿನಿಯೊಬ್ಬರು ಶೌಚಾಲಯ ಬಳಸಲು ಹೋಗಿದ್ದಾಗ ಆ ವ್ಯಕ್ತಿ ವಿದ್ಯಾರ್ಥಿನಿಯನ್ನು ಹಿಡಿದುಕೊಂಡು ಎಳೆದಾಡಿ ಆಕೆಗೆ ಮುಜುಗರವನ್ನುಂಟು ಮಾಡಿ ಬಾಯಿಯನ್ನು ಕೈಗಳಿಂದ ಮುಚ್ಚಿ ಯಾರಿಗೂ ತಿಳಿಸದಂತೆ ಬೆದರಿಕೆ ಹಾಕಿದ್ದನು.

ಗರ್ಭ ಮುಂದುವರೆಸುವ, ತೆಗೆಸುವ ಅಧಿಕಾರ ಮಹಿಳೆಗೆ ಮಾತ್ರ ಸೇರಿದೆ : ಬಾಂಬೆ ಹೈಕೋರ್ಟ್

ಈ ಬಗ್ಗೆ ವಿದ್ಯಾರ್ಥಿನಿ ಕಾಲೇಜಿನ ಪ್ರಾಂಶುಪಾಲರಿಗೆ ತಿಳಿಸಿದ್ದರು. ಪ್ರಾಂಶುಪಾಲರು ಜಯನಗರ ಪೊಲೀಸರಿಗೆ ದೂರು ನೀಡಿದ್ದರು. ಪ್ರಕರಣ ದಾಖಲಿಸಿಕೊಂಡು ತನಿಖೆ ಕೈಗೊಂಡ ಪೊಲೀಸರು ಕಾಲೇಜಿನ ಸಿಸಿ ಕ್ಯಾಮೆರಾ ಪರಿಶೀಲಿಸಿ ಆರೋಪಿಯನ್ನು ಪತ್ತೆ ಹಚ್ಚಿ ಬಂಧಿಸಿದ್ದಾರೆ.

11 ಕೋಟಿ ರೂಪಾಯಿ ಮೌಲ್ಯದ ಬ್ರೌನ್‍ಶುಗರ್ ಪತ್ತೆ

ದಕ್ಷಿಣ ವಿಭಾಗದ ಉಪಪೊಲೀಸ್ ಆಯುಕ್ತ ಕೃಷ್ಣಕಾಂತ್ ಅವರ ಮಾರ್ಗದರ್ಶನದಲ್ಲಿ ಜಯನಗರ ಉಪವಿಭಾಗದ ಸಹಾಯಕ ಪೊಲೀಸ್ ಆಯುಕ್ತ ಶ್ರೀನಿವಾಸ್ ಅವರ ನೇತೃತ್ವದಲ್ಲಿ ಇನ್ಸ್‍ಪೆಕ್ಟರ್ ಮಂಜುನಾಥ್ ಅವರನ್ನೊಳಗೊಂಡ ಸಿಬ್ಬಂದಿ ತಂಡ ಆರೋಪಿಯನ್ನು ಬಂಧಿಸುವಲ್ಲಿ ಯಶಸ್ವಿಯಾಗಿದೆ. ಇವರ ಉತ್ತಮ ಕಾರ್ಯವನ್ನು ಮೇಲಾಧಿಕಾರಿಗಳು ಪ್ರಶಂಶಿಸಿರುತ್ತಾರೆ.

Articles You Might Like

Share This Article