ನಕಲಿ ಕೀ ಬಳಸಿ ಕಳ್ಳತನ: 22 ಲಕ್ಷ ಮೌಲ್ಯದ 26 ದ್ವಿಚಕ್ರ ವಾಹನ ವಶ

Social Share

ಬೆಂಗಳೂರು, ಫೆ.6- ನಕಲಿ ಕೀ ಬಳಸಿ ದ್ವಿಚಕ್ರ ವಾಹನಗಳನ್ನು ಕಳ್ಳತನ ಮಾಡುತ್ತಿದ್ದ ಆರೋಪಿಯೊಬ್ಬನನ್ನು ಜಯನಗರ ಠಾಣೆ ಪೊಲೀಸರು ಬಂಧಿಸಿ 22 ಲಕ್ಷ ಮೌಲ್ಯದ 26 ದ್ವಿಚಕ್ರ ವಾಹನಗಳನ್ನು ವಶಪಡಿಸಿಕೊಂಡಿದ್ದಾರೆ.

ಜೆಸಿ ರಸ್ತೆಯ 2ನೇ ಕ್ರಾಸ್ ನಿವಾಸಿ ಮುರುಳಿ(39) ಬಂಧಿತ ಆರೋಪಿ. ಈತನ ಬಂಧನದಿಂದ ವಿವಿಧ ಪೊಲೀಸ್ ಠಾಣೆಗಳಲ್ಲಿ ದಾಖಲಾಗಿದ್ದ 16 ಪ್ರಕರಣಗಳು ಬೆಳಕಿಗೆ ಬಂದಿವೆ.

ಜಯನಗರ ವ್ಯಾಪ್ತಿಯಲ್ಲಿ ಜನವರಿ 27ರಂದು ಮಧ್ಯಾಹ್ನ 2 ಗಂಟೆಯಿಂದ 2.30ರ ಮಧ್ಯೆ ಹೋಂಡಾ ಆ್ಯಕ್ಟಿವಾ ದ್ವಿಚಕ್ರ ವಾಹನ ಕಳ್ಳತನವಾಗಿರುವ ಬಗ್ಗೆ ದೂರು ನೀಡಲಾಗಿತ್ತು.

ಭಾರತದಲ್ಲಿ ಮುಕ್ತ ಮನಸ್ಸಿನಿಂದ ಬಂಡವಾಳ ಹೂಡಿ : ಮೋದಿ ಕರೆ

ಈ ಬಗ್ಗೆ ಪ್ರಕರಣದ ದಾಖಲಿಸಿಕೊಂಡು ತನಿಖೆ ಕೈಗೊಂಡ ಪೊಲೀಸರು ವಿವಿಧ ಆಯಾಮಗಳಲ್ಲಿ ಮಾಹಿತಿಗಳನ್ನು ಕಲೆ ಹಾಕಿ ಆರೋಪಿಯೊಬ್ಬನನ್ನು ಬಂಧಿಸಿ ವಿಚಾರಣೆಗೊಳಪಡಿಸಿದಾಗ ನಕಲಿ ಕೀ ಬಳಸಿ ದ್ವಿಚಕ್ರ ವಾಹನಗಳನ್ನು ಕಳ್ಳತನ ಮಾಡುತ್ತಿದ್ದುದ್ದು ತಿಳಿದು ಬಂದಿದೆ. ಆರೋಪಿಯಿಂದ 22 ಲಕ್ಷ ಮೌಲ್ಯದ 26 ದ್ವಿಚಕ್ರ ವಾಹನಗಳನ್ನು ಪೊಲೀಸರು ವಶಪಡಿಸಿಕೊಂಡಿದ್ದಾರೆ.

ಆರೋಪಿಯ ಬಂಧನದಿಂದ ಜಯನಗರ ಪೊಲೀಸ್ ಠಾಣೆಯ 8 ಪ್ರಕರಣಗಳು, ಸಿದ್ದಾಪುರ ಠಾಣೆಯ 4 ಪ್ರಕರಣಗಳು, ತಿಲಕ್ ನಗರದ 3 ಹಾಗೂ ಬನಶಂಕರಿ ಠಾಣೆಯ 1 ಪ್ರಕರಣ ಸೇರಿದಂತೆ ಒಟ್ಟು 16 ಪ್ರಕರಣಗಳು ಪತ್ತೆಯಾಗಿವೆ.

ಕುಂಟುತ್ತಾ, ತೆವಳುತ್ತಾ ಸಾಗುತ್ತಿರುವ ಜಲಜೀವನ್, ಆಯುಷ್ಮಾನ್ ಯೋಜನೆಗಳು

ದಕ್ಷಿಣ ವಿಭಾಗದ ಉಪಪೊಲೀಸ್ ಆಯುಕ್ತ ಕೃಷ್ಣಕಾಂತ್ ಅವರ ಮಾರ್ಗದರ್ಶನದಲ್ಲಿ ಜಯನಗರ ಉಪವಿಭಾಗದ ಸಹಾಯಕ ಪೊಲೀಸ್ ಆಯುಕ್ತ ಶ್ರೀನಿವಾಸ್ ಅವರ ನೇತೃತ್ವದಲ್ಲಿ ಇನ್ಸ್‍ಪೆಕ್ಟರ್ ಮಂಜುನಾಥ್ ಅವರನ್ನೊಳಗೊಂಡ ಸಿಬ್ಬಂದಿ ತಂಡ ಈ ಕಾರ್ಯಾಚರಣೆ ಕೈಗೊಂಡಿತ್ತು. ತಂಡದ ಉತ್ತಮ ಕಾರ್ಯವನ್ನು ಮೇಲಾಧಿಕಾರಿಗಳು ಪ್ರಶಂಶಿಸಿರುತ್ತಾರೆ.

Articles You Might Like

Share This Article