ಮುಸ್ಲೀಂ ಸಮುದಾಯದ ಸ್ಥಿತಿಗತಿ ಅಧ್ಯಯನಕ್ಕೆ ಮುಂದಾದ ಮಹಾರಾಷ್ಟ್ರ

Social Share

ಮುಂಬೈ,ಸೆ.24- ಮುಸ್ಲೀಂ ಸಮುದಾಯದ ಸ್ಥಿತಿಗತಿ ಅಧ್ಯಯನ ಮಾಡಿಸಲು ಮಹಾರಾಷ್ಟ್ರ ಸರ್ಕಾರ ತೀರ್ಮಾನಿಸಿದೆ.
ಮುಸ್ಲೀಂರ ಸ್ಥಿತಿಗತಿ ಅಧ್ಯಯನ ಮಾಡಿಸುವ ಹೊಣೆಯನ್ನು ಟಾಟಾ ಇನ್‍ಸ್ಟಿಟ್ಯೂಟ್ ಆಫ್ ಸೋಶಿಯಲ್ ಸೈನ್ಸಸ್ ಸಂಸ್ಥೆಗೆ ವಹಿಸಲಾಗಿದೆ.

ಈ ಯೋಜನೆಯ ಅಧ್ಯಯನಕ್ಕೆ ಒಟ್ಟು 34 ಲಕ್ಷ ವಿನಿಯೋಗಿಸಲಾಗಿದೆ ಎಂದು ಮಹಾರಾಷ್ಟ್ರ ಸರ್ಕಾರ ತಿಳಿಸಿದೆ. ರಾಜ್ಯದಲ್ಲಿ ಮುಸ್ಲಿಂ ಸಮುದಾಯವನ್ನು ಆರ್ಥಿಕ ಅಭಿವೃದ್ಧಿಯ ಮುಖ್ಯವಾಹಿನಿಗೆ ತರಲು, ಮುಸ್ಲಿಂ ಸಮುದಾಯದ ಶೈಕ್ಷಣಿಕ, ಆರ್ಥಿಕ ಮತ್ತು ಸಾಮಾಜಿಕ ಸ್ಥಿತಿಯನ್ನು ಅಧ್ಯಯನ ಮಾಡುವ ಮೂಲಕ ಮತ್ತು ಭೌಗೋಳಿಕ ಪ್ರದೇಶಗಳ ನಿರ್ಬಂಧಗಳನ್ನು ಗಣನೆಗೆ ತೆಗೆದುಕೊಳ್ಳುವ ಉದ್ದೇಶದಿಂದ ಇಂತಹ ತೀರ್ಮಾನ ಕೈಗೊಳ್ಳಲಾಗಿದೆ.

ನಗರಗಳಲ್ಲಿ ಮುಸ್ಲಿಂ ಸಮುದಾಯದ ಸಾಮಾಜಿಕ, ಶೈಕ್ಷಣಿಕ ಮತ್ತು ಆರ್ಥಿಕ ಪರಿಸ್ಥಿತಿಗಳನ್ನು ಅಧ್ಯಯನ ಮಾಡಲು, ಸಂದರ್ಶನಗಳು ಮತ್ತು ಸಮುದಾಯ ಸಮೀಕ್ಷೆಗಳನ್ನು ಅಧ್ಯಯನ ಮಾಡಿ ಪ್ರಸ್ತುತಪಡಿಸಲು ಕೆಲ ಸಿಬ್ಬಂದಿಗಳನ್ನು ನಿಯೋಜಿಸಲಾಗಿದೆ.

Articles You Might Like

Share This Article