ವಿ.ಸೋಮಣ್ಣ ಅಭಿನಂದನಾ ಗ್ರಂಥ ‘ವಿಜಯಪಥ’ 20ರಂದು ಲೋಕಾರ್ಪಣೆ

Social Share

ಬೆಂಗಳೂರು, ಅ.18- ಕರ್ನಾಟಕದ ಸಾರ್ವಜನಿಕ ಕ್ಷೇತ್ರದಲ್ಲಿ ನಾಲ್ಕು ದಶಕಗಳಿಂದ ಸೇವೆ ಸಲ್ಲಿಸುತ್ತಿರುವ ಸಚಿವ ವಿ.ಸೋಮಣ್ಣ ಅವರ ಕುರಿತಾದ ವಿಜಯಪಥ ಅಭಿನಂದನಾ ಗ್ರಂಥ ಇದೇ 20ರಂದು ಲೋಕಾರ್ಪಣೆಯಾಗಲಿದೆ ಎಂದು ವಿ.ಸೋಮಣ್ಣ ಅಭಿನಂದನಾ ಸಮಿತಿ ತಿಳಿಸಿದೆ.

ಪತ್ರಿಕಾಗೋಷ್ಠಿಯನ್ನುದ್ದೇಶಿಸಿ ಮಾತನಾಡಿದ ನಿವೃತ್ತ ಐಎಎಸ್ ಅಧಿಕಾರಿ ಮತ್ತು ಅಭಿನಂದನಾ ಸಮಿತಿ ಅಧ್ಯಕ್ಷ ಡಾ. ಸಿ.ಸೋಮಶೇಖರ್ ವಿ. ಸೋಮಣ್ಣ, ಅಭಿನಂದನಾ ಸಮಿತಿ ವತಿಯಿಂದ ನಗರದ ರವೀಂದ್ರ ಕಲಾಕ್ಷೇತ್ರದಲ್ಲಿ ಅಂದು ಸಜೆ 4.30ಕ್ಕೆ ಸುತ್ತೂರು ಮಹಾಸಂಸ್ಥಾನದ ಜಗದ್ಗುರುಗಳಾದ ಶ್ರೀ ಶಿವರಾತ್ರಿ ದೇಶಿಕೇಂದ್ರ ಸ್ವಾಮೀಜಿ ಹಾಗೂ ಆದಿಚುಂಚನಗಿರಿ ಮಹಾಸಂಸ್ಥಾನದ ಜಗದ್ಗುರು ಶ್ರೀ ನಿರ್ಮಲಾನಂದನಾಥ ಸ್ವಾಮೀಜಿ, ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಸಾನಿಧ್ಯದಲ್ಲಿ ವಿಜಯಪಥ ಗ್ರಂಥ ಲೋಕಾರ್ಪಣೆಯಾಗಲಿದೆ ಎಂದು ಹೇಳಿದರು.

ಕೇಂದ್ರ ಸಚಿವ ಪ್ರಹ್ಲಾದ್ ಜೋಷಿ ಸಮಾರಂಭ ಉದ್ಘಾಟಿಸಲಿದ್ದು , ಮಾಜಿ ಉಪ ಮುಖ್ಯಮಂತ್ರಿ ಡಾ.ಜಿ.ಪರಮೇಶ್ವರ್ ಅಧ್ಯಕ್ಷತೆ ವಹಿಸಲಿದ್ದಾರೆ. ಕಂದಾಯ ಸಚಿವ ಆರ್.ಅಶೋಕ್ ಅವರು ಮುಖ್ಯ ಅತಿಥಿಗಳಾಗಿ ಪಾಲ್ಗೊಳ್ಳಲಿದ್ದು, ಲೇಖಕರು ಹಾಗೂ ವಿಮರ್ಶಕರಾದ ಡಾ.ಬೈರಮಂಗಲ ರಾಮೇಗೌಡ ಅವರು ಗ್ರಂಥ ಕುರಿತು ಮಾತನಾಡಲಿದ್ದಾರೆ. ಸಚಿವ ವಿ.ಸೋಮಣ್ಣ ಹಾಗೂ ಶೈಲಜಾ ಸೋಮಣ್ಣ ಅವರು ಉಪಸ್ಥಿತರಿರುವರು.

ಕರ್ನಾಟಕ ರಾಜ್ಯದ ಸಾರ್ವಜನಿಕ ಕ್ಷೇತ್ರದಲ್ಲಿ ಕಳೆದ ನಾಲ್ಕು ದಶಕಗಳಿಂದಲೂ ವಿ.ಸೋಮಣ್ಣ ಅವರು ತಮ್ಮದೇ ಆದ ಛಾಪು ಮೂಡಿಸಿದ್ದಾರೆ. ಬೆಂಗಳೂರು ನಗರಪಾಲಿಕೆ ಸದಸ್ಯರಾಗಿ, ಶಾಸಕರಾಗಿ, ವಿಧಾನ ಪರಿಷತ್ ಸದಸ್ಯರಾಗಿ, ಕರ್ನಾಟಕ ರಾಜ್ಯದ ಮುಖ್ಯಮಂತ್ರಿಗಳಾಗಿದ್ದ ಜೆ.ಹೆಚ್.ಪಟೇಲ್, ಬಿ.ಎಸ್. ಯಡಿಯೂರಪ್ಪ , ಡಿ.ವಿ.ಸದಾನಂದಗೌಡ , ಜಗದೀಶ್ ಶೆಟ್ಟರ್ ಅವರುಗಳ ಸಂಪುಟಗಳಲ್ಲಿ ಸಚಿವರಾಗಿ, ಪ್ರಸ್ತುತ ಬಸವರಾಜ ಬೊಮ್ಮಾಯಿ ಅವರ ಸಂಪುಟದಲ್ಲಿ ವಸತಿ ಹಾಗೂ ಮೂಲಸೌಲಭ್ಯ ಅಭಿವೃದ್ಧಿ ಸಚಿವರಾಗಿದ್ದಾರೆ.

ಯಾವುದೇ ಇಲಾಖೆಯ ಸಚಿವರಾಗಿದ್ದರೂ ತಮ್ಮ ಕಾರ್ಯವೈಖರಿ ಮೂಲಕ ಆ ಇಲಾಖೆಗಳಿಗೆ ಗೌರವ ತಂದು ಸರ್ಕಾರದ ಯೋಜನೆಗಳನ್ನು ಜನಸಾಮಾನ್ಯರಿಗೆ ತಲುಪಿಸುವಲ್ಲಿ ಸಫಲರಾಗಿದ್ದಾರೆ.

ಸಾಮಾಜಿಕ, ಸಾಂಸ್ಕøತಿಕ ಹಾಗೂ ಧಾರ್ಮಿಕ ಕ್ಷೇತ್ರಗಳಲ್ಲಿ ವಿ.ಸೋಮಣ್ಣ ಅವರು ತಮ್ಮ ಸಾರ್ವಜನಿಕ ಬದುಕಿನೊಂದಿಗೆ ಜಾತಿ, ಮತ ಹಾಗೂ ಪಕ್ಷಭೇದ ಮೀರಿ ಎಲ್ಲರನ್ನೂ ಸ್ನೇಹದಿಂದ ಕಾಣುವ ಅವರ ವ್ಯಕ್ತಿತ್ವ , ರಾಜಕೀಯ ಅನುಭವ, ಸೇವಾ ಮನೋಭಾವ, ಸಂಘಟನಾ ಸಾಮಥ್ರ್ಯ ಕುರಿತು ಅವರ ಹಿತೈಷಿಗಳು, ನಾಡಿನ ವಿವಿಧ ಕ್ಷೇತ್ರಗಳ ಗಣ್ಯರು ಬರೆದಿರುವ ಲೇಖನಗಳನ್ನು ಒಳಗೊಂಡಿರುವ ವಿಜಯಪಥ ಗ್ರಂಥವು ಸಾರ್ವಜನಿಕ ಸೇವಾ ಕ್ಷೇತ್ರಕ್ಕೆ ಮಹತ್ವದ ಕೊಡುಗೆಯಾಗಲಿದೆ.

680ಕ್ಕೂ ಹೆಚ್ಚು ಪುಟಗಳ 160ಕ್ಕೂ ಹೆಚ್ಚು ಲೇಖಕರ ಲೇಖನವನ್ನು ಒಳಗೊಂಡಿರುವ ವಿಜಯಪಥ ಗ್ರಂಥಕ್ಕೆ ಡಾ.ಬೈರಮಂಗಲ ರಾಮೇಗೌಡ ಹಾಗೂ ಪಾಲನೇತ್ರ ಅವರು ಸಂಪಾದಕರಾಗಿದ್ದಾರೆ. ಗಾಯಕಿ ಸಂಗೀತ ಕಟ್ಟಿ ಅವರ ಸುಗಮ ಸಂಗೀತವಿದೆ. ನಾಡಿನ ವಿವಿಧ ಕ್ಷೇತ್ರಗಳ ಗಣ್ಯರು ಸಮಾರಂಭದಲ್ಲಿ ಭಾಗವಹಿಸಲಿದ್ದಾರೆ ಎಂದು ಅವರು ಕಾರ್ಯಕ್ರಮದ ಮಾಹಿತಿಗಳನ್ನು ವಿವರಿಸಿದರು. ಪತ್ರಿಕಾಗೋಷ್ಠಿಯಲ್ಲಿ ಆ.ದೇವೇಗೌಡ, ಪಾಲನೇತ್ರ ಉಪಸ್ಥಿತರಿದ್ದರು.

Articles You Might Like

Share This Article