ಹಿರಿಯ ಮುಖಂಡ ಮುಕುಡಪ್ಪ ವಿರುದ್ಧ ಕಾಂಗ್ರೆಸ್ ಪ್ರತಿಭಟನೆ

Social Share

ಬೆಂಗಳೂರ,ನ.10- ಪ್ರತಿಪಕ್ಷದ ನಾಯಕ ಸಿದ್ದರಾಮಯ್ಯ ಅವರ ವಿರುದ್ಧ ಹಗುರ ಭಾಷೆಯಲ್ಲಿ ಮಾತನಾಡಿದ್ದಾರೆ ಎಂಬ ಆರೋಪದ ಹಿನ್ನೆಲೆಯಲ್ಲಿ ಹಿರಿಯ ಮುಖಂಡ ಮುಕುಡಪ್ಪ ಅವರ ಮನೆ ಬಳಿ ಕಾಂಗ್ರೆಸ್ ಕಾರ್ಯಕರ್ತರು ಪ್ರತಿಭಟನೆ ನಡೆಸಿದ್ದಾರೆ.

ನಿನ್ನೆ ಕುರುಬ ಸಮುದಾಯದ ಪತ್ರಿಕಾಗೋಷ್ಠಿಯಲ್ಲಿ ಮುಕುಡಪ್ಪ ಹಾಗೂ ಮತ್ತೊಬ್ಬರು ಲೋಕಾಭಿರಾಮವಾಗಿ ಮಾತನಾಡಿರುವುದು ದೃಶ್ಯ ಮಾಧ್ಯಮಗಳ ಕ್ಯಾಮೆರಾದಲ್ಲಿ ಸೆರೆಯಾಗಿದೆ.

ಬೆಂಗಳೂರಿಗರೇ ನಾಳೆ ರಸ್ತೆಗಿಳಿಯುವ ಮುನ್ನ ಇಲ್ಲಿ ಗಮನಿಸಿ

ಮಾತಿನ ಮಧ್ಯೆ ಇಬ್ಬರು ನಾಯಕರು ಸಿದ್ದರಾಮಯ್ಯ ಅವರ ಚಾರಿತ್ರ್ಯಹರಣವಾಗುವಂತಹ ವಿಷಯವನ್ನು ಪ್ರಸ್ತಾಪಿಸಿದ್ದಾರೆ. ಇದು ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ. ಇಂದು ಬೆಳಗ್ಗೆ ಕೆಲ ಕಾಂಗ್ರೆಸ್ ನಾಯಕರು ಹಾಗೂ ಸಿದ್ದರಾಮಯ್ಯ ಬೆಂಬಲಿಗರು ಮುಕುಡಪ್ಪ ಅವರ ವಿಜಯನಗರದ ಮನೆ ಮುಂದೆ ಜಮಾವಣೆಗೊಂಡು ಪ್ರತಿಭಟನೆ ನಡೆಸಿದ್ದಾರೆ.

ಮುರುಘಾ ಮಠದ ಮಾಜಿ ಆಡಳಿತಾಧಿಕಾರಿ ಬಸವರಾಜನ್ ಅರೆಸ್ಟ್

ಭಿತ್ತಿ ಪತ್ರ ಅಂಟಿಸಿ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಮುಕುಡಪ್ಪ ಅವರ ಭಾವಚಿತ್ರಕ್ಕೆ ಮಸಿ ಬಳಿಯಲಾಗಿದೆ.

Articles You Might Like

Share This Article