ಅಕ್ರಮ ಮರಳು ಸಾಗಾಣೆ : ಇಬ್ಬರ ಬಂಧನ

Arrested-01

ಹುಣಸೂರು, ಅ.22- ಅಕ್ರಮವಾಗಿ ಮರಳು ಸಾಗಣೆ ನಡೆಸುತ್ತಿದ್ದ ವೇಳೆ ಗ್ರಾಮಾಂತರ ಠಾಣೆ ಪೊಲೀಸರು ದಾಳಿ ನಡೆಸಿ ಮರಳು ತುಂಬಿದ್ದ ಟಿಪ್ಪರ್ ಸಮೇತ ಇಬ್ಬರು ಆರೋಪಿಗಳನ್ನು ಬಂಧಿಸಿದ್ದಾರೆ.ಹನಗೋಡು ಹೋಬಳಿ ಹರಳಹಳ್ಳಿಯ ಬಳಿ ಲಕ್ಷ್ಮಣ ತೀರ್ಥ ನದಿಯಿಂದ ಅಕ್ರಮವಾಗಿ ಮರಳನ್ನು ಟಿಪ್ಪರ್‍ನಲ್ಲಿ ತುಂಬಿಕೊಂಡು ಸಾಗಿಸುತ್ತಿದ್ದ ವೇಳೆ ಖಚಿತ ಮಾಹಿತಿ ಮೇರೆಗೆ ದಾಳಿ ನಡೆಸಿದ ಪಿಎಸ್‍ಐ ಪುಟ್ಟಸ್ವಾಮಿ ಮತ್ತು ತಂಡ ಟಿಪ್ಪರ್ ಹಾಗೂ ಹರಳಹಳ್ಳಿ ಕುಮಾರ್ ಎಂಬುವರನ್ನು ವಶಕ್ಕೆ ಪಡೆದಿದ್ದಾರೆ.
ಉಳಿದ ಮೂವರು ತಲೆ ಮರೆಸಿಕೊಂಡಿದ್ದಾರೆ ವಶಕ್ಕೆ ಪಡೆದ ಆರೋಪಿಯನ್ನು ನ್ಯಾಯಾಂಗ ಬಂಧನಕ್ಕೆ ಒಪ್ಪಿಸಿದ್ದು, ಆರೋಪಿಗಳ ಪತ್ತೆಗಾಗಿ ಪೊಲೀಸರು ಕ್ರಮ ಕೈಗೊಂಡಿದ್ದಾರೆ ಗ್ರಾಮಾಂತರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.ಆರೋಪಿ ಮರಳುಗಾರಿಕೆ ಹಿನ್ನಲೆಯಲ್ಲಿ ಪೊಲೀಸರ ಕೈಗೆ ಸಿಗದೆ ಒಂದು ವರ್ಷದಿಂದ ತಲೆ ಮರೆಸಿಕೊಂಡಿದ್ದ ಆರೋಪಿಯನ್ನು ಗ್ರಾಮಾಂತರ ಪೊಲೀಸರು ಪತ್ತೆ ಹಚ್ಚಿ ಬಂಧಿಸಿದ್ದಾರೆ.

 

► Follow us on –  Facebook / Twitter  / Google+

 

Sri Raghav

Admin