ಅಧಿಕೃತವಾಗಿ ಕಾಂಗ್ರೆಸ್ ಸೇರಿದ ನವಜೋತ್ ಸಿಂಗ್ ಸಿದ್ದು
ನವದೆಹಲಿ,ಜ.15-ನಿರೀಕ್ಷೆಯಂತೆ ಮಾಜಿ ಕ್ರಿಕೆಟಿಗ ಹಾಗೂ ರಾಜ್ಯಸಭೆ ಮಾಜಿ ಸದಸ್ಯ ನವಜೋತ್ ಸಿಂಗ್ ಸಿದ್ದು ಇಂದು ಅಧಿಕೃತವಾಗಿ ಕಾಂಗ್ರೆಸ್ ಪಕ್ಷಕ್ಕೆ ಸೇರ್ಪಡೆಯಾಗಿದ್ದಾರೆ. ಈ ಮೂಲಕ ಪಂಜಾಬ್ ವಿಧಾನಸಭೆ ಚುನಾವಣೆಗೆ ಸ್ಪರ್ಧಿಸುವ ಸಾಧ್ಯತೆಯಿದೆ. ದೆಹಲಿಯಲ್ಲಿಂದು ಎಐಸಿಸಿ ಉಪಾಧ್ಯಕ್ಷ ರಾಹುಲ್ ಗಾಂಧಿ ಅವರ ಸಮ್ಮುಖದಲ್ಲಿ ಸಿದ್ದು ಕಾಂಗ್ರೆಸ್ಗೆ ವಿದ್ಯುಕ್ತವಾಗಿ ಸೇರ್ಪಡೆಗೊಂಡರು. ಈ ಹಿಂದೆ ಅವರು ಬಿಜೆಪಿಯಿಂದ ರಾಜ್ಯಸಭಾ ಸದಸ್ಯರಾಗಿದ್ದರು. ನಂತರ ಅವರು ಪಕ್ಷಕ್ಕೆ ರಾಜೀನಾಮೆ ನೀಡಿ ಸ್ವತಂತ್ರ ಪಕ್ಷ ಸ್ಥಾಪಿಸುವ ಸಿದ್ಧತೆಯಲ್ಲಿದ್ದರು. ಸಿದ್ದು ಅವರ ಪತ್ನಿ ಕೌರ್ ಈಗಾಗಲೇ ಕಾಂಗ್ರೆಸ್ ಪಕ್ಷದಲ್ಲಿ ಶಾಸಕರಾಗಿದ್ದಾರೆ. ಕಾಂಗ್ರೆಸ್ ಪಕ್ಷಕ್ಕೆ ಸೇರ್ಪಡೆಯಾಗಿರುವ ಸಿದ್ದು ಅವರಿಗೆ ಅಮೃತಸರ ಪೂರ್ವ ವಿಧಾನಸಭಾ ಕ್ಷೇತ್ರದಿಂದ ಟಿಕೆಟ್ ಲಭಿಸುವ ಸಾಧ್ಯತೆ ನಿಚ್ಚಳವಾಗಿದ್ದು, ಮುಂದಿನ ಚುನಾವಣೆಗೆ ಅಭ್ಯರ್ಥಿಯಾಗಲಿದ್ದಾರೆ ಎಂದು ಹೇಳಲಾಗಿದೆ.
< Eesanje News 24/7 ನ್ಯೂಸ್ ಆ್ಯಪ್ >
Click Here to Download : Android / iOS