ಅಧಿವೇಶನದ ನಂತರ ಸಚಿವ ಸಂಪುಟ ವಿಸ್ತರಣೆ : ಸಿದ್ದರಾಮಯ್ಯ

Spread the love

Siddaramaiha-Session

ಬೆಂಗಳೂರು, ಜೂ.6-ಅಧಿವೇಶನದ ನಂತರ ಸಚಿವ ಸಂಪುಟ ವಿಸ್ತರಣೆ ಮಾಡುವುದಾಗಿ ಮುಖ್ಯ ಮಂತ್ರಿ ಸಿದ್ದರಾಮಯ್ಯ ಹೇಳಿದರು. ಖಾಲಿ ಉಳಿದಿರುವ ಸಚಿವ ಸ್ಥಾನ ಗಳನ್ನು ಅಧಿವೇಶನ ಮುಗಿದ ಕೂಡಲೇ ಭರ್ತಿ ಮಾಡುವುದಾಗಿ ಸುದ್ದಿಗಾರರಿಗೆ ತಿಳಿಸಿದರು. ಬರಪರಿಹಾರ ಕಾಮಗಾರಿ ಪರಿಸ್ಥಿತಿ ನಿರ್ವಹಣೆ ಕುರಿತು ಸದನದಲ್ಲಿ ಉತ್ತರ ನೀಡುವುದಾಗಿ ಹೇಳಿದರು.ಸಾಮಾಜಿಕ ನ್ಯಾಯದ ಹರಿಕಾರ ದೇವರಾಜ ಅರಸು ಅವರು ಸಮಾನತೆ ತರಲು ಶ್ರಮಿಸಿದ್ದರು. ಹಿಂದುಳಿದ ವರ್ಗಗಳ ಅಭಿವೃದ್ಧಿಗೆ ಹೊಸ ಹೊಸ ಯೋಜನೆಗಳನ್ನು ರೂಪಿಸಿದ್ದರು. ಅವರ ಮಾರ್ಗದರ್ಶನದಲ್ಲಿಯೇ ನಮ್ಮ ಸರ್ಕಾರ ಹಿಂದುಳಿದವರು, ದಲಿತರು, ಅಲ್ಪಸಂಖ್ಯಾತರ ಅಭಿವೃದ್ಧಿಗೆ ಕಾರ್ಯಯೋಜನೆಗಳನ್ನು ರೂಪಿಸಿದೆ ಎಂದು ಸಿದ್ದರಾಮಯ್ಯ ಹೇಳಿದರು.

< Eesanje News 24/7 ನ್ಯೂಸ್ ಆ್ಯಪ್  >

 Click Here to Download  :  Android / iOS

Facebook Comments

Sri Raghav

Admin