ಅಪ್ರಾಪ್ತೆಯ ಮೇಲೆ ಅತ್ಯಾಚಾರ : ಆರೋಪಿ ಬಂಧನ

rape--case

ತುಮಕೂರು, ಫೆ.4-ಮದುವೆಯಾಗುವುದಾಗಿ ನಂಬಿಸಿ ಬಲವಂತವಾಗಿ ಅಪ್ರಾಪ್ತ ಬಾಲಕಿಯೊಬ್ಬಳನ್ನು ತಮಿಳುನಾಡಿಗೆ ಕರೆದೊಯ್ದು ನಿರಂತರ ಅತ್ಯಾಚಾರವೆಸಗಿದ್ದು,ಕಾಮಾಂಧನಿಂದ ತಪ್ಪಿಸಿಕೊಂಡು ಬಂದ ಬಾಲಕಿ ಪೊಲೀಸರಿಗೆ ದೂರು ನೀಡಿರುವ ಘಟನೆ ನಡೆದಿದೆ.ತುಮಕೂರು ಹೊರವಲಯದ ಶಾಲೆ ಬಿಟ್ಟಿದ್ದ ಅಪ್ರಾಪ್ತ ಬಾಲಕಿಯನ್ನು ಮದುವೆಯಾಗುವುದಾಗಿ ಪುಸಲಾಯಿಸಿ,ತಮಿಳು ನಾಡು ಮೂಲದ ಮಂಜುನಾಥ್(30) ಎಂಬಾತ ಕಳೆದ 15 ದಿನಗಳ ಹಿಂದೆ ಕರೆದುಕೊಂಡು ಹೋಗಿ ಮನೆಯೊಂದರಲ್ಲಿ ಕೂಡಿ ಹಾಕಿ ನಿರಂತರ ಅತ್ಯಾಚಾರವೆಸಗಿದ್ದು, ದೈಹಿಕ ಹಿಂಸೆ ತಾಳಲಾರದೆ ಬಾಲಕಿ ತಪ್ಪಿಸಿಕೊಂಡು ಬಂದಿದ್ದಾಳೆ.ನಂತರ ತುಮಕೂರು ಮಹಿಳಾ ಪೊಲೀಸ್ ಠಾಣೆಗೆ ದೂರು ನೀಡಿದ್ದು, ಪೋಕ್ಸೋ ಕಾಯ್ದೆ ಅಡಿಯಲ್ಲಿ ಕೇಸು ದಾಖಲಿಸಿದ ಮಹಿಳಾ ಪೊಲೀಸರು ಆರೋಪಿ ಮಂಜುನಾಥ್‍ನನ್ನು ಬಂಧಿಸಿ, ಹೆಚ್ಚಿನ ತನಿಖೆಗೆ ಒಳಪಡಿಸಿದ್ದಾರೆ. ಅಲ್ಲದೆ ಬಾಲಕಿಯನ್ನು ವೈದ್ಯಕೀಯ ತಪಾಸಣೆಗೆ ಒಳಪಡಿಸಿದ್ದಾರೆ.

< Eesanje News 24/7 ನ್ಯೂಸ್ ಆ್ಯಪ್  >

 Click Here to Download  :  Android / iOS  

Sri Raghav

Admin