ಅಮಿತ್ ಷಾ ನಿವಾಸದಲ್ಲಿ ನಾಳೆ ಬಿಜೆಪಿ ಕೋರ್ ಕಮಿಟಿ ಸಭೆ

Spread the love

Amith-Shah-Yadiyurappa

ಬೆಂಗಳೂರು, ಮಾ.13- ನವದೆಹಲಿಯಲ್ಲಿ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಅಮಿತ್ ಷಾ ನಿವಾಸದಲ್ಲಿ ನಾಳೆ ಸಂಜೆ ನಡೆಯಲಿರುವ ಕೋರ್ ಕಮಿಟಿ ಸಭೆಯಲ್ಲಿ ರಾಜ್ಯಾಧ್ಯಕ್ಷ ಬಿ.ಎಸ್.ಯಡಿಯೂರಪ್ಪ , ಕೇಂದ್ರ ಸಚಿವ ಸದಾನಂದಗೌಡ, ಮುಖಂಡ ಕೆ.ಎಸ್.ಈಶ್ವರಪ್ಪ , ಜಗದೀಶ್‍ಶೆಟ್ಟರ್, ಪ್ರಹ್ಲಾದ್ ಜೋಷಿ ಸೇರಿದಂತೆ ಕೋರ್ ಕಮಿಟಿಯ ಎಲ್ಲ ಸದಸ್ಯರು ಈ ಸಭೆಯಲ್ಲಿ ಭಾಗವಹಿಸಲಿದ್ದಾರೆ.  ಪಂಚರಾಜ್ಯ ಚುನಾವಣೆಯಲ್ಲಿ ಬಿಜೆಪಿ ಅಭೂತ ಪೂರ್ವ ಗೆಲುವು ಸಾಧಿಸಿರುವ ಹಿನ್ನೆಲೆಯಲ್ಲಿ ಅಮಿತ್ ಷಾ ಅವರು ತಮ್ಮ ನಿವಾಸದಲ್ಲಿ ಮೋದಿ ಅವರಿಗೆ ಔತಣ ಕೂಟ ಏರ್ಪಡಿಸಿದ್ದಾರೆ.

ಇದೇ ವೇಳೆ ಕರ್ನಾಟಕ ಕೋರ ಕಮಿಟಿಯ ಎಲ್ಲಾ ಸದಸ್ಯರು ಭಾಗವಹಿಸಬೇಕೆಂದು ಸೂಚನೆ ಕೊಡಲಾಗಿದೆ. ಈ ಹಿನ್ನೆಲೆಯಲ್ಲಿ ರಾಜ್ಯದ ಪ್ರಮುಖರು ನವದೆಹಲಿಗೆ ತೆರಳುತ್ತಿದ್ದಾರೆ.  ಇದೇ ವೇಳೆ ಕಾಂಗ್ರೆಸ್ ಪಕ್ಷ ತೊರೆದು ಬಿಜೆಪಿಗೆ ಸೇರಲು ಮುಂದಾಗಿರುವ ಹಿರಿಯ ಧುರೀಣ ಎಸ್.ಎಂ.ಕೃಷ್ಣ ಅವರ ಜೊತೆ ನಾಳೆ ಅಮಿತ್ ಷಾ ಸಮಾಲೋಚನೆ ನಡೆಸಲಿದ್ದಾರೆ.  ಇದೇ 15 ರಂದು ಎಸ್.ಎಂ.ಕೆ ಅವರು ಅಧಿಕೃತವಾಗಿ ಬಿಜೆಪಿ ಸೇರ್ಪಡೆಯಾಗಲಿದ್ದಾರೆ. ನಾಳೆಯ ಕೋರ್ ಕಮಿಟಿ ಸಭೆಯಲ್ಲಿ ಎಸ್.ಎಂ. ಕೃಷ್ಣ ಅವರಿಗೆ ಪಕ್ಷದಲ್ಲಿ ಸ್ಥಾನಮಾನ ನೀಡುವುದು, ಅವರ ಹಿರಿತನವನ್ನು ಯಾವ ರೀತಿ ಬಳಕೆ ಮಾಡಿಕೊಳ್ಳಬೇಕು, 2018ರಲ್ಲಿ ನಡೆಯುವ ಚುನಾವಣೆಯಲ್ಲಿ ಪಕ್ಷ ಗೆಲ್ಲಲು ಕೈಗೊಳ್ಳಬೇಕಾದ ಕಾರ್ಯಗಳ ಬಗ್ಗೆ ಚರ್ಚೆ ನಡೆಯಲಿದೆ ಎಂದು ಪಕ್ಷದ ಮೂಲಗಳು ತಿಳಿಸಿವೆ.

< Eesanje News 24/7 ನ್ಯೂಸ್ ಆ್ಯಪ್  >

 Click Here to Download  :  Android / iOS  

Sri Raghav

Admin