ಅಸಮಾನತೆ ದೂರ ಮಾಡಲು ಮುಂದಾಗಿ : ಕೇಶವರೆಡ್ಡಿ

chikkabalapura

ಚಿಕ್ಕಬಳ್ಳಾಪುರ, ಸೆ.1- ಪ್ರತಿಯೊಬ್ಬರು ಸಾಮಾಜಿಕ ಪಿಡುಗು, ಅಸ್ಪೃಶ್ಯತೆ ನಿವಾರಣೆಯ ಸಂಕಲ್ಪದೊಂದಿಗೆ ದೇಶದಲ್ಲಿ ಅಸಮಾನತೆಯನ್ನು ದೂರ ಮಾಡಲು ಮುಂದಾಗಬೇಕೆಂದು ಜಿಪಂ ಅಧ್ಯಕ್ಷ ಪಿ.ಎನ್.ಕೇಶವರೆಡ್ಡಿ ಸಲಹೆ ನೀಡಿದರು.ನಗರದ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ಡಾ ಬಿ.ಆರ್.ಅಂಬೇಡ್ಕರ್ 125 ನೇ ಜಯಂತಿ ಪ್ರಯುಕ್ತ ಶ್ರೀ ಸಾಯಿಕೃಷ್ಣ ಚಾರಿಟೇಬಲ್ ಟ್ರಸ್ಟ್ ಆಯೋಜಿಸಿದ್ದ ಅಂಬೇಡ್ಕರ್ ಕುರಿತ ಪ್ರಬಂಧ, ರಸಪ್ರಶ್ನೆ ಮತ್ತು ಭಾಷಣ ಸ್ಪರ್ಧೆ ಕಾರ್ಯಕ್ರಮ ಉದ್ಘಾಟಿಸಿ ಅವರು ಮಾತನಾಡಿದರು.
ಅಂಬೇಡ್ಕರ್ ದೇಶಕ್ಕೆ ಸಮಾನತೆಯನ್ನು ಸಾರುವ ಸಂವಿಧಾನವನ್ನು ಕೊಡುಗೆಯಾಗಿ ಕೊಟ್ಟರು. ಈ ಮೂಲಕ ತಮ್ಮ ಜೀವನದ ಕೊನೆಯವರೆಗೂ ಸಮಾನತೆಯನ್ನು ಪ್ರತಿಪಾದಿಸಿಕೊಂಡು ಬಂದರು ಎಂದು ಮೆಚ್ಚುಗೆ ವ್ಯಕ್ತಪಡಿಸಿದರು.ಅಂಬೇಡ್ಕರ್ ಅವರ ಆಶಯದಂತೆ ದೇಶದಲ್ಲಿ ಅಸ್ಪೃಶ್ಯತೆಯನ್ನು ದೂರ ಮಾಡಲು ಮುಂದಾಗಬೇಕೆಂದು ಸಲಹೆ ನೀಡಿದರು.ಪ್ರೊ .ಕೋಡಿರಂಗಪ್ಪ, ತಾಪಂ ಅಧ್ಯಕ್ಷ ಬಿ.ಎಂ.ರಾಮುಸ್ವಾಮಿ, ಸ್ಥಾಯಿ ಸಮಿತಿ ಅಧ್ಯಕ್ಷ ತಿರುಮಳಪ್ಪ, ಸದಸ್ಯರಾದ ನಾರಾಯಣಪ್ಪ, ಮುತ್ತುರಾಯಪ್ಪ, ಪ್ರಾಂಶುಪಾಲ ನಾರಾಯಣಸ್ವಾಮಿ, ಯುವ ಕಾಂಗ್ರೆಸ್ ಅಧ್ಯಕ್ಷ ಎಸ್.ಪಿ.ಶ್ರೀನಿವಾಸ್ ಮತ್ತಿತರರು ಉಪಸ್ಥಿತರಿದ್ದರು.

 

► Follow us on –  Facebook / Twitter  / Google+

Sri Raghav

Admin