‘ಆಕ್ರೋಶ ದಿವಸ್‍’ಗೆ ಜೆಡಿಎಸ್ ಬೆಂಬಲ ನೀಡುವುದಿಲ್ಲ : ಎಚ್.ಡಿ.ದೇವೇಗೌಡ

Spread the love

Devegowda-01

ಶಿವಮೊಗ್ಗ, ನ.27-ದೇಶಾದ್ಯಂತ 500 ಹಾಗೂ 1000 ರೂ. ಮುಖಬೆಲೆಯ ನೋಟುಗಳನ್ನು ನಿಷೇಧಿಸಿರುವುದನ್ನು ವಿರೋಧಿಸಿ ನಡೆಸುತ್ತಿರುವ ಆಕ್ರೋಶ ದಿವಸ್‍ಗೆ ತಮ್ಮ ಪಕ್ಷ ಬೆಂಬಲ ನೀಡುವುದಿಲ್ಲ ಎಂದು ಜೆಡಿಎಸ್ ರಾಷ್ಟ್ರೀಯ ಅಧ್ಯಕ್ಷ ಹಾಗೂ ಮಾಜಿ ಪ್ರಧಾನಿ ಎಚ್.ಡಿ.ದೇವೇಗೌಡ ತಿಳಿಸಿದ್ದಾರೆ. ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಕಾಂಗ್ರೆಸ್ ಬೆಂಬಲಿತ ಆಕ್ರೋಶ ದಿವಸಕ್ಕೆ ಜೆಡಿಎಸ್ ಬೆಂಬಲ ನೀಡುವುದಿಲ್ಲ ಎಂದು ಸ್ಪಷ್ಟಪಡಿಸಿದ್ದಾರೆ.  ನೋಟುಗಳ ನಿಷೇಧಿಸುವ ಮುನ್ನ ಸೂಕ್ತ ಪೂರ್ವಸಿದ್ಧತೆಗಳನ್ನು ಮಾಡಿಕೊಳ್ಳಬೇಕಿತ್ತು. ಆದರೆ ಏಕಾಏಕಿ ನಿಷೇಧ ಮಾಡಿದ್ದರಿಂದ ಸಾಮಾನ್ಯ ಜನರಿಗೆ ಸಮಸ್ಯೆ ಉಂಟಾಗಿದೆ. ಸಮಸ್ಯೆಯನ್ನು ನಿವಾರಿಸುವಲ್ಲಿ ಕೇಂದ್ರ ಸರ್ಕಾರ ಪೂರ್ಣವಾಗಿ ಯಶಸ್ಸು ಕಂಡಿಲ್ಲ. ಕಪ್ಪು ಹಣ ನಿಯಂತ್ರಣಕ್ಕೆ ಕೇಂದ್ರ ಸರ್ಕಾರ ಕೈಗೊಳ್ಳುವ ನಿರ್ಧಾರಕ್ಕೆ ನಮ್ಮ ಬೆಂಬಲವಿದೆ. ಜನರಿಗೆ ತೊಂದರೆಯಾಗದಂತೆ ಕ್ರಮಕೈಗೊಳ್ಳಬೇಕು ಎಂದರು.


ನೋಟ್ ಬ್ಯಾನ್ ಖಂಡಿಸಿ ಕರೆಕೊಟ್ಟಿರುವ ಭಾರತ್ ಬಂದ್ ಗೆ ನಿಮ್ಮ ಬೆಂಬಲವಿದೆಯೇ ..?

View Results


ಪ್ರಧಾನಿ ನರೇಂದ್ರ ಮೋದಿ ಹಾಗೂ ಕೇಂದ್ರ ಹಣಕಾಸು ಸಚಿವ ಅರುಣ್‍ಜೇಟ್ಲಿ ಅವರಿಗೆ ಪತ್ರ ಬರೆದು ನೋಟು ನಿಷೇಧದಿಂದ ಜನಸಾಮಾನ್ಯರಿಗಾಗುತ್ತಿರುವ ಸಮಸ್ಯೆಗಳನ್ನು ಪರಿಹರಿಸುವಂತೆ ಕೋರಲಾಗಿತ್ತು. ಸಂಸತ್‍ನ ಉಭಯ ಸದನಗಳ ಅಧಿವೇಶನದಲ್ಲಿ ಮೋದಿಯವರು ಕೆಲ ಕಾಲ ಪಾಲ್ಗೊಂಡಿದ್ದರು. ಆದರೆ ಅಧಿವೇಶನದ ಚರ್ಚೆಯಲ್ಲಿ ಪಾಲ್ಗೊಂಡು ಸಮರ್ಪಕ ಉತ್ತರ ನೀಡಬೇಕಾಗಿತ್ತು. ನೋಟುಗಳ ನಿಷೇಧ ವಿಚಾರದ ಗೊಂದಲಕ್ಕೆ ಸಂಸತ್ ಕಲಾಪ ಬಲಿಯಾಯಿತು. ಸಮಗ್ರವಾದ ಚರ್ಚೆ ನಡೆಯಲಿಲ್ಲ ಎಂದು ಬೇಸರ ವ್ಯಕ್ತಪಡಿಸಿದರು.

> ಯಾವ ಸುದ್ದಿಯನ್ನೂ ಮಿಸ್ ಮಾಡ್ಕೋಬೇಡಿ… :  Eesanje News 24/7 ನ್ಯೂಸ್ ಆ್ಯಪ್ –  Click Here to Download 

Facebook Comments

Sri Raghav

Admin