ಆದಿಚುಂಚನಗಿರಿ ಶ್ರೀಗಳನ್ನು ಭೇಟಿಯಾಗಿ ಆಶೀರ್ವಾದ ಪಡೆದ ನಿಯೋಜಿತ ಸಿಎಂ ಕುಮಾರಸ್ವಾಮಿ

Kumaraswam,y

ಬೆಂಗಳೂರು.ಮೇ.19 : ಬೆಂಗಳೂರು ವಿಜಯನಗರದ ಶ್ರೀ ಆದಿಚುಂಚನಗಿರಿ ಮಹಾಸಂಸ್ಥಾನ ಶಾಖಾ ಮಠಕ್ಕೆ ನಿಯೋಜಿತ ಮುಖ್ಯಮಂತ್ರಿ ಎಚ್ ಡಿ. ಕುಮಾರಸ್ವಾಮಿಯವರು ಭೇಟಿ ನೀಡಿ ಶ್ರೀ ಆದಿಚುಂಚನಗಿರಿ ಮಹಾಸಂಸ್ಥಾನ ಮಠದ ಪೀಠಾಧ್ಯಕ್ಷರಾದ ಪರಮಪೂಜ್ಯ ಜಗದ್ಗುರು ಶ್ರೀ ಶ್ರೀ ಶ್ರೀ ಡಾ. ನಿರ್ಮಲಾನಂದನಾಥ ಮಹಾ ಸ್ವಾಮೀಜಿಗಳವರಿಂದ ಆಶೀರ್ವಾದ ಪಡೆದರು.  ಇಂದು ಯಡಿಯೂರಪ್ಪನವರ 3 ದಿನಂದ ಸರ್ಕಾರ ಉರುಳಿದ ನಂತರ ಕಾಂಗ್ರೆಸ್-ಜೆಡಿಎಸ್ ಮೈತ್ರಿಕೂಟದ ಸರ್ಕಾರ ರಚನೆಗೆ ರಾಜ್ಯಪಾಲರು ಅವಕಾಶ ನೀಡಿದ್ದು, ನೂತನ ಮುಖ್ಯಮಂತ್ರಿಯಾಗಿ ಹೆಚ್‌.ಡಿ.ಕುಮಾರಸ್ವಾಮಿ ಸೋಮವಾರ ಪ್ರಮಾಣ ವಚನ ಸ್ವೀಕರಿಸಲಿದ್ದಾರೆ.

ರಾಜ್ಯದಲ್ಲಿ 25 ನೇ ಮುಖ್ಯಮಂತ್ರಿಯಾಗಿ ಹೆಚ್.ಡಿ ಕುಮಾರ ಸ್ವಾಮಿ ಅವರು ಎರಡನೇ ಬಾರಿ ಅಧಿಕಾರ ಸ್ವೀಕಾರ ಮಾಡುವುದಕ್ಕೆ ಕ್ಷಣಗಣನೆ ಆರಂಭವಾಗಿದೆ. ಪ್ರಮಾಣ ವಚನ ಸ್ವೀಕಾರ ಸಮಾರಂಭಕ್ಕೆ ಮಹೂರ್ತ ನಿಗದಿಯಾಗಿದ್ದು, ಸೋಮವಾರ ಮಧ್ಯಾಹ್ನ 12 ಗಂಟೆ ಬೆಂಗಳೂರಿನ ರಾಜಭವನ ಅಥಾವ ಬೆಳಗಾವಿಯ ಸುವರ್ಣ ಸೌಧದಲ್ಲಿ ಹೆಚ್.ಡಿ ಕುಮಾರ ಸ್ವಾಮಿ ಅವರು ಪ್ರಮಾಣ ವಚನವನ್ನು ಸ್ವೀಕಾರ ಮಾಡಲಿದ್ದಾರೆ ಎನ್ನಲಾಗಿದೆ.

Sri Raghav

Admin