ಆರ್ಥಿಕ ಇಲಾಖೆ ಅಧಿಕಾರಿಗಳೊಂದಿಗೆ ಸಿಎಂ ಕುಮಾರಸ್ವಾಮಿ ಮೊದಲ ಸಭೆ

Kumaraswamy-CM

ಬೆಂಗಳೂರು,ಮೇ 25- ಅಧಿಕಾರ ವಹಿಸಿಕೊಂಡ ನಂತರ ಇದೇ ಮೊದಲ ಬಾರಿಗೆ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಅವರು ಆರ್ಥಿಕ ಇಲಾಖೆ ಅಧಿಕಾರಿಗಳೊಂದಿಗೆ ಸಭೆ ನಡೆಸಲಿದ್ದಾರೆ.  ರಾಜ್ಯದ ಆರ್ಥಿಕ ಸ್ಥಿತಿಗತಿಗಳ ಬಗ್ಗೆ ಮಾಹಿತಿ ಪಡೆಯುವ ಸಂಬಂಧ ಇಂದು ಸಂಜೆ ನಡೆಯಲಿರುವ ಈ ಸಭೆಯಲ್ಲಿ ಆರ್ಥಿಕ ಇಲಾಖೆಯ ಹೆಚ್ಚುವರಿ ಮುಖ್ಯ ಕಾರ್ಯದರ್ಶಿ ಸೇರಿದಂತೆ ಹಣಕಾಸು ಇಲಾಖೆಯ ಹಿರಿಯ ಅಧಿಕಾರಿಗಳು ಪಾಲ್ಗೊಳ್ಳಲಿದ್ದು , ಇಲಾಖೆಯ ಮಾಹಿತಿ ನೀಡಲಿದ್ದಾರೆ.

ಕಾಂಗ್ರೆಸ್-ಜೆಡಿಎಸ್ ಪಕ್ಷಗಳು ಚುನಾವಣೆ ಸಂದರ್ಭದಲ್ಲಿ ನೀಡಿದ್ದ ಪ್ರಣಾಳಿಕೆಯಲ್ಲಿನ ಭರವಸೆಗಳ ಈಡೇರಿಕೆ, ಸಾಲಮನ್ನಾ , ಬಜೆಟ್ ಮಂಡನೆ ಸೇರಿದಂತೆ ಇನ್ನಿತರ ಎಲ್ಲ ಚಟುವಟಿಕೆಗಳಿಗೆ ಅಗತ್ಯವಿರುವ ಹಣಕಾಸಿನ ವಿಷಯವಾಗಿ ಮಾಹಿತಿ ಪಡೆಯಲಿರುವ ಈ ಸಭೆ ಮಹತ್ವವೆನಿಸಿದೆ. ವಿಶ್ವಾಸ ಮತ ಸಾಬೀತಿನ ನಂತರ ಅಧಿಕೃತವಾಗಿ ಇಂದು ಆಡಳಿತ ಆರಂಭಿಸಲಿರುವ ಮುಖ್ಯಮಂತ್ರಿ ಕುಮಾರಸ್ವಾಮಿ ಅವರು ಪ್ರಪ್ರಥಮವಾಗಿ ಆರ್ಥಿಕ ಇಲಾಖೆ ಅಧಿಕಾರಿಗಳೊಂದಿಗೆ ಸಭೆ ನಡೆಸಿದರು.

Sri Raghav

Admin