ಆಶ್ರಮ ಶಾಲೆಗಳಲ್ಲಿ ಸಿಸಿಟಿವಿ ಕಡ್ಡಾಯ : ಮೈಸೂರು ಡಿಸಿ ಆದೇಶ

Spread the love

CCTV-Hostel

ಮೈಸೂರು, ಮೇ 20- ಆಶ್ರಮ ಶಾಲೆಗಳಲ್ಲಿ ಸಿಸಿಟಿವಿ ಅಳವಡಿಸಲು ಜಿಲ್ಲಾಧಿಕಾರಿಗಳು ಖಡಕ್ ಆದೇಶ ನೀಡಿದ್ದಾರೆ. ವಿದ್ಯಾರ್ಥಿಗಳ ಹಿತದೃಷ್ಟಿಯಿಂದ ಪ್ರತಿ ಆಶ್ರಮ ಶಾಲೆಗಳಲ್ಲಿ ಸಿಸಿಟಿವಿ ಕ್ಯಾಮೆರಾಗಳನ್ನು ಅಳವಡಿಸಬೇಕೆಂದು ಜಿಲ್ಲಾಧಿಕಾರಿ ರಂದೀಪ್ ಸೂಚಿಸಿದ್ದಾರೆ.  ಈ ಸಂಬಂಧ ನಡೆದ ಸಭೆಯಲ್ಲಿ ಮಾತನಾಡಿದ ಅವರು, ವಿದ್ಯಾರ್ಥಿಗಳ ಹಿತದೃಷ್ಟಿಯಿಂದ ಸಿಸಿಟಿವಿ ಕ್ಯಾಮೆರಾ ಅಳವಡಿಸಬೇಕು. ವಿದ್ಯಾರ್ಥಿಗಳ ಅಭ್ಯಾಸಕ್ಕೆ ತೊಂದರೆಯಾಗದಂತೆ ಸೂಕ್ತ ಸಾರಿಗೆ ಕಲ್ಪಿಸಬೇಕು. ಶಿಕ್ಷಕರು ಮನಸೋ ಇಚ್ಛೆ ಶಾಲೆಗೆ ಬರುತ್ತಾರೆಂಬ ದೂರು ಕೇಳಿಬಂದ ಹಿನ್ನೆಲೆಯಲ್ಲಿ ಈ ಕ್ರಮ ಕೈಗೊಳ್ಳಲಾಗಿದೆ ಎಂದರು.ಆದಿವಾಸಿಗಳ ಮುಖಂಡರು ಸಭೆಯಲ್ಲಿ ಪಾಲ್ಗೊಂಡು ಆಶ್ರಮ ಶಾಲೆಗಳಲ್ಲಿ ವ್ಯವಸ್ಥೆಗಳು ಸರಿಯಿಲ್ಲ. ಪಾಠ-ಪ್ರವಚನಗಳು ಸರಿಯಾಗಿ ನಡೆಯುತ್ತಿಲ್ಲ. ಶಿಕ್ಷಕರ ಗೈರು ಹಾಜರಿಯಿಂದ ವಿದ್ಯಾರ್ಥಿಗಳಿಗೆ ತೊಂದರೆಯಾಗುತ್ತಿದೆ ಎಂದು ಜಿಲ್ಲಾಧಿಕಾರಿಗಳ ಗಮನಕ್ಕೆ ತಂದರು. ಈ ಬಗ್ಗೆ ಅಧಿಕಾರಿಗಳೊಂದಿಗೆ ಚರ್ಚಿಸಿ ವಿದ್ಯಾರ್ಥಿಗಳಿಗೆ ತೊಂದರೆಯಾಗದಂತೆ ಕ್ರಮ ಕೈಗೊಳ್ಳುವುದಾಗಿ ಭರವಸೆ ನೀಡಿದರು.

< Eesanje News 24/7 ನ್ಯೂಸ್ ಆ್ಯಪ್  >

 Click Here to Download  :  Android / iOS

Sri Raghav

Admin