ಆಸ್ಟ್ರೇಲಿಯಾ 282 ರನ್ ಗಳ ಟಾರ್ಗೆಟ್ ನೀಡಿದ ಟೀಮ್ ಇಂಡಿಯಾ (Live)

Pandya

ಚೆನ್ನೈ,ಸೆ.17- ಟೀಂ ಇಂಡಿಯಾ ಹಾಗೂ ಆಸ್ಟ್ರೇಲಿಯಾ ನಡುವಿನ ಮೊದಲ ಏಕದಿನ ಪಂದ್ಯದಲ್ಲಿ ಭಾರತ 281 ರನ್ ಗಳನ್ನು ಪೇರಿಸಿದ್ದು ಆಸ್ಟ್ರೇಲಿಯಾಗೆ ಗೆಲ್ಲಲು 282 ರನ್ ಗುರಿ ನೀಡಿದೆ. ಇಲ್ಲಿನ ಚಪಾಕ್ ಎಂಎ ಕ್ರೀಡಾಂಗಣದಲ್ಲಿ ಆರಂಭವಾದ ಏಕದಿನ ಸರಣಿಯ ಮೊದಲ ಪಂದ್ಯದಲ್ಲಿ ಆಸ್ಟ್ರೇಲಿಯಾ ವಿರುದ್ದ ಭಾರತ ಟಾಸ್ ಗೆದ್ದು ಬ್ಯಾಟಿಂಗ್ ಆಯ್ಕೆ ಮಾಡಿಕೊಂಡಿತ್ತು . ಆರಂಭದಲ್ಲೇ ಆಘಾತವನ್ನನುಭವಿಸಿದ ಟೀಮ್ ಇಂಡಿಯಾ ನಂತರ ಚೇತರಿಸಿಕೊಂಡು ಉತ್ತಮ ಮೊತ್ತ ಕಲೆಹಾಕುವಲ್ಲಿ ಯಶಸ್ವಿಯಾಯಿತು. ಒಂದು ಹಂತದಲ್ಲಿ  ಕೇವಲ 41 ರನ್ ಗಳಿಗೆ ಪ್ರಮುಖ 3 ವಿಕೆಟ್ ಗಳನ್ನು ಕಳೆದುಕೊಂಡು ಸಂಕಷ್ಟಕ್ಕೆ ಸಿಲುಕಿತ್ತು . ಆಪತ್ಭಾಂದವರಂತೆ ಬಂದ ಮಾಜಿ ನಾಯಕ ಎಂಎಸ್ ಧೋನಿ ಹಾಗೂ ಆಲ್ ರೌಂಡರ್ ಹಾರ್ದಿಕ್ ಪಾಂಡ್ಯ ಜೋಡಿ ಶತಕದ ಜತೆಯಾಟದಿಂದಾಗಿ ಭಾರತ ಸ್ಪರ್ಧಾತ್ಮಕ ಮೊತ್ತ ಪೇರಿಸಲು ಸಾಧ್ಯವಾಯಿತು.

ಕಳೆದೆರಡು ತಿಂಗಳಿನಿಂದ ಗೆಲುವಿನ ನಾಗಾಲೋಟದಲ್ಲಿರುವ ಭಾರತ ಪ್ರಬಲ ಆಸ್ಟ್ರೇಲಿಯಾ ತಂಡ ಸವಾಲಾಗಿದೆ. ಶ್ರೀಲಂಕಾ ವಿರುದ್ಧ ಏಕದಿನ, ಟೆಸ್ಟ್ ಹಾಗೂ ಟಿ-20ಯಲ್ಲಿ ಕ್ಲೀನ್ ಸ್ವಿಪ್ ಸಾಧನೆ ಮಾಡಿ ಬೀಗುತ್ತಿರುವ ನಾಯಕ ವಿರಾಟ್ ಕೊಹ್ಲಿ ನೇತೃತ್ವದ ಭಾರತ ತಂಡ ಅದೇ ಪ್ರದರ್ಶನವನ್ನು ಮುಂದುವರೆಸುವ ತವಕದಲ್ಲಿದೆ. ಆದರೆ ವಿಶ್ವ ಚಾಂಪಿಯನ್ ಆಸ್ಟ್ರೇಲಿಯಾ ಹೆಚ್ಚು ಬಲಾಢ್ಯವಾಗಿದ್ದು , ಭಾರತಕ್ಕೆ ತಿರುಗೇಟು ನೀಡಲು ಸಜ್ಜಾಗಿದೆ.

ಭಾರತ : IND 32/3 (9.5 Ovs)

Sri Raghav

Admin