ಇಂಡಿಯನ್ ನ್ಯೂ ಕಾಂಗ್ರೆಸ್ ಪಾರ್ಟಿ ಸೇರಿದ ಪ್ರೇಮಕುಮಾರಿ

Prema-Kumari--02

ಮೈಸೂರು, ಜ.7-ಹೊಸದಾಗಿ ಅಸ್ತಿತ್ವಕ್ಕೆ ಬಂದಿರುವ ಇಂಡಿಯನ್ ನ್ಯೂ ಕಾಂಗ್ರೆಸ್ ಪಾರ್ಟಿಗೆ ಪ್ರೇಮಕುಮಾರಿ ಸೇರ್ಪಡೆಗೊಂಡಿದ್ದಾರೆ. ನಗರದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಪ್ರೇಮಕುಮಾರಿ, ಇದು ನೂತನ ಪಕ್ಷವಾಗಿದ್ದು, ಗುಜರಾತ್‍ನಲ್ಲಿ ಈ ಬಾರಿ ನಡೆದ ವಿಧಾನಸಭೆ ಚುನಾವಣೆಯಲ್ಲಿ ಪಕ್ಷದಿಂದ ಸ್ಪರ್ಧಿಸಲಾಗಿತ್ತು. ಇದೇ ಪ್ರಥಮ ಬಾರಿಗೆ ಕರ್ನಾಟಕದಲ್ಲಿ ಪಕ್ಷದಿಂದ ಅಭ್ಯರ್ಥಿಗಳನ್ನು ಕಣಕ್ಕಿಳಿಸುವ ಕೆಲಸ ಮಾಡಲಾಗುತ್ತಿದೆ ಎಂದರು.

ನಾನು ಈಗಾಗಲೇ ವ್ಯಕ್ತಿಯೊಬ್ಬರನ್ನು ನಂಬಿ ನೊಂದಿದ್ದೇನೆ. ಇದೇ ರೀತಿ ಹಲವರು ತೊಂದರೆಗೆ ಒಳಗಾಗಿದ್ದಾರೆ. ಅಂತಹ ಮಹಿಳೆಯರ ರಕ್ಷಣೆಗೆ ಹಾಗೂ ಸೇವೆಗಾಗಿ ರಾಜಕೀಯ ಪ್ರವೇಶಕ್ಕೆ ಮುಂದಾಗಿದ್ದೇನೆ. ನೊಂದ ಮಹಿಳೆಯರಿಗೆ ಜೀವನ ಕಲ್ಪಿಸುವ ಉದ್ದೇಶದಿಂದ ಸಮಾಜ ಸೇವೆಯಲ್ಲಿ ತೊಡಗಲಿದ್ದೇನೆ ಎಂದು ಹೇಳಿದರು.   ಮೈಸೂರಿನಲ್ಲಿ ನಗರ ಜಿಲ್ಲೆಯಲ್ಲಿನ ವಿಧಾನಸಭಾ ಕ್ಷೇತ್ರವೊಂದರಲ್ಲಿ ಸ್ಪರ್ಧಿಸಲು ಇಚ್ಛಿಸಿದ್ದು ಇಲ್ಲಿನ 7 ಕ್ಷೇತ್ರಗಳ ಯಾವುದಾದರು ಒಂದರಲ್ಲಿ ಹಾಗೂ ಪಕ್ಷದ ವರಿಷ್ಠರು ಸೂಚಿಸುವ ಕ್ಷೇತ್ರದಲ್ಲಿ ಸ್ಪರ್ಧಿಸುತ್ತೇನೆ ಎಂದು ಹೇಳಿದರು.

Sri Raghav

Admin