ಇರಾಕ್’ನಲ್ಲಿ ಆತ್ಮಾಹುತಿ ಬಾಂಬ್ ದಾಳಿಗೆ 25 ಬಲಿ
ಬಾಗ್ದಾದ್,ಏ.5- ಉತ್ತರ ಬಾಗ್ದಾದ್ನ ಟಿಕ್ರಿತ್ ಪಟ್ಟಣದಲ್ಲಿ ಉಗ್ರರು ನಡೆಸಿದ ಆತ್ಮಾಹುತಿ ಬಾಂಬ್ ದಾಳಿಯಲ್ಲಿ 25ಕ್ಕೂ ಹೆಚ್ಚು ಜನ ಮೃತಪಟ್ಟಿದ್ದಾರೆ. ಅನೇಕರು ಗಾಯಗೊಂಡಿದ್ದು, ಅವರಲ್ಲಿ ಕೆಲವರ ಸ್ಥಿತಿ ಚಿಂತಾಜನಕವಾಗಿದೆ. ಸಾವಿನ ಸಂಖ್ಯೆ ಇನ್ನು ಹೆಚ್ಚುವ ಸಾಧ್ಯತೆ ಇದೆ ಎಂದು ಅಧಿಕಾರಿಯೊಬ್ಬರು ತಿಳಿಸಿದ್ದಾರೆ.
ಪೊಲೀಸ್ ಪಡೆಯೊಂದನ್ನು ಗುರಿಯಾಗಿಟ್ಟುಕೊಂಡು ಉಗ್ರರು ಈ ದಾಳಿ ನಡೆಸಿದ್ದಾರೆ. ಮೂವರು ಆತ್ಮಾಹುತಿ ಬಾಂಬರ್ಗಳು ಕೂಡ ತಮ್ಮನ್ನು ತಾವು ಸ್ಪೋಟಿಸಿಕೊಂಡು ಸಾವನ್ನಪ್ಪಿದ್ದಾರೆ ಎಂದು ಭದ್ರತಾ ಪಡೆ ಅಧಿಕಾರಿ ಅಹಮ್ಮದ್ ಅಲ್ ಕರೀಂ ತಿಳಿಸಿದ್ದಾರೆ. ನಿನ್ನೆ ನಡೆದ ಬಾಂಬ್ ದಾಳಿಯಲ್ಲಿ ಹತ್ತು ಮಂದಿ ಪೊಲೀಸರು ಸಾವನ್ನಪ್ಪಿ 31 ಜನ ಗಾಯಗೊಂಡಿದ್ದರು. ಕಳೆದ 24 ಗಂಟೆಗಳಲ್ಲಿ ಇದು 2ನೇಯ ಭಯೋತ್ಪಾದಕ ಕೃತ್ಯವಾಗಿದೆ ಎಂದು ಅವರು ಹೇಳಿದ್ದಾರೆ.
< Eesanje News 24/7 ನ್ಯೂಸ್ ಆ್ಯಪ್ >