ಉತ್ತರಪ್ರದೇಶ ಕಾಂಗ್ರೆಸ್ ಅಧ್ಯಕ್ಷ ಸ್ಥಾನಕ್ಕೆ ರಾಜ್ಬಬ್ಬರ್ ರಾಜೀನಾಮೆ
ನವದೆಹಲಿ, ಮಾ.16-ಉತ್ತರ ಪ್ರದೇಶದಲ್ಲಿ ಕಾಂಗ್ರೆಸ್ ಪಕ್ಷದ ಹೀನಾಯ ಸೋಲಿನ ನೈತಿಕ ಹೊಣೆ ಹೊತ್ತು ಉತ್ತರ ಪ್ರದೇಶದ ಕಾಂಗ್ರೆಸ್ ಅಧ್ಯಕ್ಷ ಸ್ಥಾನಕ್ಕೆ ರಾಜ್ ಬಬ್ಬರ್ ರಾಜೀನಾಮೆ ನೀಡಿದ್ದಾರೆ. ಉತ್ತರಪ್ರದೇಶದಲ್ಲಿ ಬಿಜೆಪಿ ಪ್ರಚಂಡ ಜಯಗಳಿಸಿದ್ದು, ಎಸ್ಪಿ ಕಾಂಗ್ರೆಸ್ ಮೈತ್ರಿ ಕೂಟಕ್ಕೆ ತೀವ್ರ ಹಿನ್ನಡೆಯಾಗಿದೆ. ನನ್ನ ಮೇಲೆ ನಂಬಿಕೆ ಇಟ್ಟು ಉತ್ತರಪ್ರದೇಶದ ಕಾಂಗ್ರೆಸ್ ಅಧ್ಯಕ್ಷ ಸ್ಥಾನದ ಜವಾಬ್ದಾರಿಯನ್ನು ವಹಿಸಲಾಗಿತ್ತು. ಆದರೆ ನಾನು ಕಾಂಗ್ರೆಸ್ ಪಕ್ಷದ ನಿರೀಕ್ಷೆಯನ್ನು ತಲುಪಲಾಗಲಿಲ್ಲ. ಹೀಗಾಗಿ ನಾನೇ ಸೋಲಿನ ಹೊಣೆ ಹೊತ್ತು ರಾಜೀನಾಮೆ ನೀಡುತ್ತಿರುವುದಾಗಿ ಅವರು ತಿಳಿಸಿದ್ದಾರೆ. ಎಐಸಿಸಿ ಉಪಾಧ್ಯಕ್ಷ ರಾಹುಲ್ಗಾಂಧಿಯವರು ಚುನಾವಣೆಯಲ್ಲಿ ಸಾಕಷ್ಟು ಶ್ರಮ ವಹಿಸಿದರೂ ನಿರೀಕ್ಷಿತ ಫಲ ಸಿಗಲಿಲ್ಲ ಎಂದು ಅವರು ಹೇಳಿದ್ದಾರೆ.
< Eesanje News 24/7 ನ್ಯೂಸ್ ಆ್ಯಪ್ >
Click Here to Download : Android / iOS
Facebook Comments