ಉತ್ತರಭಾರತದ 15 ಕಡೆ ಐಟಿ ದಾಳಿ : ಭಾರಿ ತೆರಿಗೆ ವಂಚನೆ ಪ್ರಕರಣಗಳು ಪತ್ತೆ
ನವದೆಹಲಿ, ಮೇ 24- ಉತ್ತರಭಾರತದ ವಿವಿಧೆಡೆ ಇಂದು ಇಬ್ಬರು ಐಎಎಸ್ ಅಧಿಕಾರಿಗಳೂ ಸೇರಿದಂತೆ ಪ್ರಭಾವಿಗಳ ನಿವಾಸ ಮತ್ತು ಕಚೇರಿಗಳ ಮೇಲೆ ದಾಳಿ ನಡೆಸಿದ ಆದಾಯ ತೆರಿಗೆ ಅಧಿಕಾರಿಗಳು ಭಾರೀ ತೆರಿಗೆ ವಂಚನೆ ಪ್ರಕರಣಗಳನ್ನು ಪತ್ತೆ ಮಾಡಿದ್ದಾರೆ. ಉತ್ತರಪ್ರದೇಶ ಮತ್ತು ದೆಹಲಿ ಸೇರಿದಂತೆ 15 ಕಡೆ ಐಟಿ ಅಧಿಕಾರಿಗಳು ದಾಳಿ ನಡೆಸಿದ್ದಾರೆ. ಲಕ್ನೋ, ನೋಯ್ಡಾ, ಗ್ರೇಟರ್ ನೋಯ್ಡಾ, ಮೀರತ್, ಭಾಗ್ಪತ್, ಮೈನ್ಪುರಿ ಮತ್ತು ದೆಹಲಿಯಲ್ಲಿ ಇಂದು ಮುಂಜಾನೆಯಿಂದಲೇ ಐಟಿ ಅಧಿಕಾರಿಗಳ ತಂಡ ಏಕಕಾಲದಲ್ಲಿ ದಾಳಿ ನಡೆಸಿದೆ.
ಐಎಎಸ್ ಅಧಿಕಾರಿಗಳಾದ ಆರೋಗ್ಯ ಇಲಾಖೆ ನಿರ್ದೇಶಕ ಹೃದಯ ಶಂಕರ್ ತಿವಾರಿ ಮತ್ತು ಗ್ರೇಟರ್ ನೋಯ್ಡಾ ಪ್ರಾಧಿಕಾರದ ಹೆಚ್ಚುವರಿ ಮುಖ್ಯ ಕಾರ್ಯನಿರ್ವಹಣಾಧಿಕಾರಿ ವಿ.ಕೆ.ಶರ್ಮ ಮತ್ತು ಅವರ ಪತ್ನಿ ಮತ್ತು ಆರ್ಟಿಒ ಅಧಿಕಾರಿ ಮಮತಾ ಶರ್ಮಾ ಹಾಗೂ ಹೆಚ್ಚುವರಿ ಕಾರ್ಯದರ್ಶಿ(ಬಂದೀಖಾನೆಗಳು) ಎಸ್.ಕೆ.ಸಿಂಗ್ ಅವರ ಕಚೇರಿ ಮತ್ತು ಮನೆಗಳ ಮೇಲೆ ದಾಳಿ ನಡೆಸಲಾಗಿದೆ. ಈ ಸಂದರ್ಭದಲ್ಲಿ ದೊಡ್ಡ ಪ್ರಮಾಣದ ತೆರಿಗೆ ವಂಚನೆ ಪ್ರಕರಣಗಳು ಬೆಳಕಿಗೆ ಬಂದಿದ್ದು ಮುಂದಿನ ಕ್ರಮ ಕೈಗೊಳ್ಳಲಾಗಿದೆ.
< Eesanje News 24/7 ನ್ಯೂಸ್ ಆ್ಯಪ್ >