ಉತ್ತರಾಖಂಡ್ನ ಚಮೋಲಿ ಜಿಲ್ಲೆಯಲ್ಲಿ ಸೇನಾ ಹೆಲಿಕಾಪ್ಟರ್ ಪತನ
ಚಮೋಲಿ, ಅ.19-ಭಾರತೀಯ ವಾಯುಪಡೆ (ಐಎಎಫ್) ಹೆಲಿಕಾಪ್ಟ ರೊಂದು ಇಂದು ಉತ್ತರಾಖಂಡ್ನ ಚಮೋಲಿ ಜಿಲ್ಲೆಯ ಪ್ರದೇಶವೊಂದರಲ್ಲಿ ಪತನಗೊಂಡಿದೆ. ಈ ದುರಂತದಲ್ಲಿ ಸಾವು-ನೋವು ಸಂಭವಿಸಿಲ್ಲ.ಸೇನಾ ಹೆಲಿಕಾಪ್ಟರ್ ಅಭ್ಯಾಸದಲ್ಲಿ ತೊಡಗಿದ್ದ ವೇಳೆ ಈ ಘಟನೆ ಸಂಭವಿಸಿದೆ. ಯಾವುದೇ ಪ್ರಾಣ ಹಾನಿಯಾಗಿಲ್ಲ ಎಂದು ಐಎಎಫ್ ಅಧಿಕಾರಿಯೊಬ್ಬರು ತಿಳಿಸಿದ್ದಾರೆ. ರಾಜಸ್ಥಾನದ ಬರ್ಮೆರ್ನಲ್ಲಿ 15 ದಿನಗಳ ಹಿಂದೆ ವಾಯುಪಡೆಯ ಫೈಟರ್ಜೆಟ್ ಪತನಗೊಂಡಿತ್ತು. ಪೈಲಟ್ಗಳು ಸುರಕ್ಷಿತವಾಗಿ ಪಾರಾಗಿದ್ದರು.
► Follow us on – Facebook / Twitter / Google+
Facebook Comments