ಉತ್ತರ ಕರ್ನಾಟಕದಲ್ಲಿ ದಿನದಿಂದ ದಿನಕ್ಕೆ ಹೆಚ್ಚುತ್ತಿರುವ ಬಿಸಿಲಿನ ತಾಪ
ಬಾದಾಮಿ,ಫೆ.22- ಬೇಸಿಗೆ ಕಾಲದವಾದ್ದರಿಂದ ಉತ್ತರ ಕರ್ನಾಟಕದಲ್ಲಿ ದಿನದಿಂದ ದಿನಕ್ಕೆ ಬಿಸಿಲಿನ ಪ್ರಮಾಣ ಹೆಚ್ಚಾಗುತ್ತಿರುವ ಕಾರಣ ಜನರು ತಂಪು ಪಾನೀಯಗಳ ಮೊರೆ ಹೋಗುತ್ತಿದ್ದಾರೆ. ಮುಂಜಾನೆ 9ಗಂಟೆಯಿಂದ ಸಂಜೆ 5ಗಂಟೆಯವರೆಗೂ ಬಿಸಿಲಿನ ತಾಪ ಹೆಚ್ಚಾಗಿರುತ್ತದೆ. ಮಧ್ಯಾಹ್ನ ಉರಿಬಿಸಿಲಿನ ತಾಪದಿಂದಾಗಿ ಜನ ತಂಪಾದ ನೀರು, ಪಾನೀಯ, ಎಳನೀರು, ಐಸ್ಕ್ರೀಮ್, ಚಾಕೋಬಾರ್, ಮಜ್ಜಿಗೆ, ಕೋಲ್ಡ್ ಡ್ರಿಂಕ್ಸ್, ಕಲ್ಲಂಗಡಿ ಹಣ್ಣುಗಳ ಮೊರೆ ಹೋಗುತ್ತಿದ್ದಾರೆ. ಗ್ರಾಮೀಣ ಪ್ರದೇಶದ ಜನರು ನಗರಕ್ಕೆ ವಿವಿಧ ಕೆಲಸಗಳಿಗಾಗಿ ಬರುವವರು ಬೆಳಿಗ್ಗೆ ಬಂದು ಮಧ್ಯಾಹ್ನ ತಮ್ಮ ಊರು ಸೇರುತ್ತಿದ್ದಾರೆ. ವಿಪರೀತ ಬಿಸಿಲಿನ ಕಾರಣ ನಗರ ಪ್ರದೇಶದ ಬಹುತೇಕ ಜನರು ಮನೆ ಬಿಟ್ಟು ಹೊರಬರಲು ಹಿಂದೇಟು ಹಾಕುತ್ತಿದ್ದಾರೆ. ಏಪ್ರಿಲ್ ಮತ್ತು ಮೇ ಮಾಹೆಯ ಕೊನೆಯವರೆಗೆ ಅಥವಾ ಮಳೆಗಾಲ ಪ್ರಾರಂಭವಾಗುವವರೆಗೆ ಬಿಸಿಲು ಇದೇ ರೀತಿ ಮುಂದುವರೆಯಲಿದೆ ಎಂದು ಹವಾಮಾನ ಇಲಾಖೆ ಅಧಿಕಾರಿಗಳು ತಿಳಿಸಿದ್ದಾರೆ.
< Eesanje News 24/7 ನ್ಯೂಸ್ ಆ್ಯಪ್ >