ಉತ್ತರ ಪ್ರದೇಶದಲ್ಲಿ ಮೊದಲ ಹಂತದ ಮತದಾನ ಆರಂಭ

Voting----001

ಲಖನೌ. ಫೆ.11 : ದೇಶಾದ್ಯಂತ ಭಾರಿ ಕುತೂಹಲ ಕೆರಳಿಸಿರುವ ಉತ್ತರ ಪ್ರದೇಶ ವಿಧಾನಸಭಾ ಚುನಾವಣೆಯ ಮೊದಲ ಹಂತದ ಮತದಾನ ಆರಂಭವಾಗಿದ್ದು, ರಾಜ್ಯಾದ್ಯಂತ ಬಿಗಿ ಭದ್ರತೆಯನ್ನು ಕೈಗೊಳ್ಳಲಾಗಿದೆ. ಇಂದು 73 ವಿಧಾನಸಭಾ ಕ್ಷೇತ್ರಗಳಲ್ಲಿ ಮತದಾನ ನಡೆಯುತ್ತಿದೆ. 77 ಮಹಿಳಾ ಅಭ್ಯರ್ಥಿಗಳು ಸೇರಿ ಒಟ್ಟು 833 ಅಭ್ಯರ್ಥಿಗಳು ಕಣದಲ್ಲಿದ್ದಾರೆ. ಬೆಳಿಗ್ಗೆ 7 ಗಂಟೆಗೆ ಮತದಾನದ ಪ್ರಕ್ರಿಯೆ ಆರಂಭವಾಗಿದ್ದು ಸಂಜೆ 5 ಕ್ಕೆ ಮುಕ್ತಾಯಗೊಳ್ಳಲಿದೆ. ಪ್ರಮುಖ ವಿಧಾನಸಭಾ ಕ್ಷೇತ್ರಗಲ್ಲಿ ಬೆಳಿಗ್ಗೆ 9 ಗಂಟೆ ವರೆಗೆ ಮತದಾನ ಪ್ರಮಾಣದ ಬಗ್ಗೆ ವರದಿಗಳು ಪ್ರಕಟವಾಗಿದ್ದು, ಅಲೀಘರ್ ವಿಧಾನಸಭಾ ಕ್ಷೇತ್ರದಲ್ಲಿ ಶೇ.10.5 ರಷ್ಟು ಮತದಾನ, ಬುಲಂದ್ ಶಹರ್ ನಲ್ಲಿ ಶೇ.12 ರಷ್ಟು ಮತದಾನ ನಡೆದಿದ್ದರೆ, ಮುಜಾಫರ್ ನಗರದಲ್ಲಿ ಶೇ.15 ರಷ್ಟು ಮತದಾನ ನಡೆದಿದೆ.

ಪಂಚರಾಜ್ಯಗಳ ಪೈಕಿ ಈಗಾಗಲೇ ಗೋವಾ ಮತ್ತು ಪಂಜಾಬ್ನಲ್ಲಿ ಏಕಹಂತದಲ್ಲಿಯೇ ಚುನಾವಣೆ ಮುಗಿದಿದ್ದು, ಯುಪಿಯಲ್ಲಿ 7 ಹಂತಗಳಲ್ಲಿ ಚುನಾವಣೆ ನಡೆಯಲಿದೆ. 2014ರ ಲೋಕಸಭಾ ಚುನಾವಣೆಯಲ್ಲಿ ರಾಜ್ಯದಲ್ಲಿ ಪ್ರಚಂಡ ಗೆಲುವನ್ನು ದಾಖಲಿಸಿದ್ದ ಬಿಜೆಪಿಯನ್ನು ಬಗ್ಗುಬಡಿಯಲು ಸಮಾಜವಾದಿ ಪಕ್ಷ ಮತ್ತು ಕಾಂಗ್ರೆಸ್ ಮೈತ್ರಿ ಮಾಡಿಕೊಂಡು ಕಣಕ್ಕಿಳಿದಿವೆ.

< Eesanje News 24/7 ನ್ಯೂಸ್ ಆ್ಯಪ್  >

 Click Here to Download  :  Android / iOS  

Sri Raghav

Admin