ಉತ್ತರ ಪ್ರದೇಶ ವಿಧಾನಸಭೆ ಚುನಾವಣೆ : ಇಂದು 2ನೇ ಹಂತದ ಮತದಾನ

Spread the love

UP-Voting--0-1

ಲಕ್ನೋ. ಫೆ.15-ಉತ್ತರ ಪ್ರದೇಶ ವಿಧಾನಸಭೆ ಚುನಾವಣೆಗೆ ಇಂದು  ಎರಡನೇ ಹಂತದ ಮತದಾನ ನಡೆಯುತ್ತಿದೆ , 11 ಜಿಲ್ಲೆಗಳ 67 ಕ್ಷೇತ್ರಗಳಲ್ಲಿ ವ್ಯಾಪಕ ಬಂದೋಬಸ್ತ್ ಮಾಡಲಾಗಿದೆ. 2.28 ಕೋಟಿ ಮತದಾರರು ಚುನಾವಣಾ ಕಣದಲ್ಲಿರುವ 795 ಅಭ್ಯರ್ಥಿಗಳ ಹಣೆಬರಹ ನಿರ್ಧರಿಸಲಿದ್ದಾರೆ.   ದೇಶದ ಅತಿ ಹೆಚ್ಚು ವಿಧಾನಸಭಾ ಕ್ಷೇತ್ರಗಳನ್ನು (404) ಹೊಂದಿರುವ ಉತ್ತರಪ್ರದೇಶದಲ್ಲಿ ಒಟ್ಟು ಏಳು ಹಂತಗಳಲ್ಲಿ ಮತದಾನ ನಡೆಯುತ್ತಿದೆ . ಎರಡನೇ ಹಂತಕ್ಕಾಗಿ 14,771 ಮತಕೇಂದ್ರಗಳು ಮತ್ತು 23,603 ಮತಗಟ್ಟೆಗಳ ವ್ಯವಸ್ಥೆ ಮಾಡಲಾಗಿದೆ.   ಸಮಾಜವಾದಿ ಪಕ್ಷದ ಪರಮೋಚ್ಛ ನಾಯಕ ಮುಲಾಯಂ ಸಿಂಗ್ ಯಾದವ್, ಕಾಂಗ್ರೆಸ್ ಅಧ್ಯಕ್ಷೆ ಸೋನಿಯಾ ಗಾಂಧಿ ಸೇರಿದಂತೆ ಅತಿರಥ-ಮಹಾರಥರ ಈ ಬಾರಿ ಚುನಾವಣೆ ಪ್ರಚಾರದಲ್ಲಿ ಭಾಗವಹಿಸಿಲ್ಲ.

ರಾಜ್ಯದಲ್ಲಿ ಎಸ್‍ಪಿ ಮತ್ತು ಕಾಂಗ್ರೆಸ್ ನಡುವೆ ಮೈತ್ರಿ ಏರ್ಪಟ್ಟು, ಮುಖ್ಯಮಂತ್ರಿ ಮುಲಾಯಂ ಸಿಂಗ್ ಯಾದವ್ ಮತ್ತು ಕಾಂಗ್ರೆಸ್ ಉಪಾಧ್ಯಕ್ಷ ರಾಹುಲ್ ಗಾಂಧಿ ಈಗಾಗಲೇ ಜಂಟಿಯಾಗಿ ಬಿರುಸಿನ ಪ್ರಚಾರ ಕೈಗೊಂಡು ಗಮನಸೆಳೆದಿದ್ದಾರೆ.   ಆದರೆ, ಕಾಂಗ್ರೆಸ್ ಜೊತೆ ಮೈತ್ರಿಗೆ ತೀವ್ರ ಅಸಮಾಧಾನ ವ್ಯಕ್ತಪಡಿಸಿರುವ ಮುಲಾಯಂ ಆರಂಭದ ಎರಡು ಹಂತದ ಚುನಾವಣಾ ಪ್ರಚಾರದಿಂದ ದೂರ ಉಳಿದಿದ್ದಾರೆ. ಅನಾರೋಗ್ಯದ ಕಾರಣ ಸೋನಿಯಾ ಪ್ರಚಾರದಲ್ಲಿ ಭಾಗವಹಿಸಿಲ್ಲ.  ಅನಿರೀಕ್ಷಿತ ರಾಜಕೀಯಕ್ಕೆ ಸಾಕ್ಷಿಯಾದ ಉತ್ತರಪ್ರದೇಶದಲ್ಲಿ ಫೆ.11ರಂದು 15 ಜಿಲ್ಲೆಗಳ 73 ಕ್ಷೇತ್ರಗಳಲ್ಲಿ ನಡೆದ ಮೊದಲ ಹಂತದ ಚುನಾವಣೆಯಲ್ಲಿ ಶೇ.64ರಷ್ಟು ಮತದಾನ ಆಗಿತ್ತು. ಮುಂದಿನ ಐದು ಹಂತಗಳಿಗೆ ಫೆ.19, 23, 27, ಹಾಗೂ ಮಾರ್ಚ್ 4 ಮತ್ತು 8ರಂದು ಮತದಾನ ನಡೆಯಲಿದೆ. ಮಾರ್ಚ್ 11ರಂದು ಫಲಿತಾಂಶ ಪ್ರಕಟಗೊಳ್ಳಲಿದೆ.

< Eesanje News 24/7 ನ್ಯೂಸ್ ಆ್ಯಪ್  >

 Click Here to Download  :  Android / iOS  

Facebook Comments

Sri Raghav

Admin