ಉಪವಾಸ ಸತ್ಯಾಗ್ರಹ ಕೈಬಿಡುವಂತೆ ದೇವೇಗೌಡರಿಗೆ ಸಿದ್ದರಾಮಯ್ಯ ಮನವಿ

Spread the love

Devegowda

ಬೆಂಗಳೂರು, ಅ.1-ಕಾವೇರಿಗಾಗಿ ಅಹೋರಾತ್ರಿ ಉಪವಾಸ ಕುಳಿತಿರುವ ದೇವೇಗೌಡರಿಗೆ ದೂರವಾಣಿ ಕರೆ ಮಾಡಿದ ಮುಖ್ಯಮಂತ್ರಿ ಸಿದ್ದರಾಮಯ್ಯ ಆರೋಗ್ಯ ವಿಚಾರಿಸಿ ಸತ್ಯಾಗ್ರಹದಿಂದ ಹಿಂದೆ ಸರಿಯುವಂತೆ ಮನವಿ ಮಾಡಿದ್ದಾರೆ. ಈ ಸಂದರ್ಭದಲ್ಲಿ ಹಾಗೂ ಈ ವಯಸ್ಸಿನಲ್ಲಿ ಉಪವಾಸ ಸತ್ಯಾಗ್ರಹ ಮಾಡುವುದು ಆರೋಗ್ಯ ದೃಷ್ಟಿಯಿಂದ ಒಳ್ಳೆಯದಲ್ಲ. ತಾವು ಈ ಸತ್ಯಾಗ್ರಹದಿಂದ ಹಿಂದೆ ಸರಿಯಬೇಕು. ನಾನು ಬಂದು ತಮ್ಮೊಂದಿಗೆ ಮಾತನಾಡುತ್ತೇನೆ. ಸಂಜೆ ನಡೆಯುವ ಸರ್ವಪಕ್ಷ ಸಭೆಯಲ್ಲಿ ತಾವು ಭಾಗವಹಿಸಿ ಮುಂದೆ ಕೈಗೊಳ್ಳಬೇಕಾದ ಕ್ರಮಗಳ ಬಗ್ಗೆ ಸಲಹೆ ಕೊಡಿ ಎಂದು ಮನವಿ ಮಾಡಿದ್ದಾರೆ. ಕಾವೇರಿಗಾಗಿ ಆಗ್ರಹಿಸಿ ದೇವೇಗೌಡರು ಇಂದು ಅಹೋರಾತ್ರಿ ಉಪವಾಸ ಸತ್ಯಾಗ್ರಹ ಕುಳಿತಿದ್ದಾರೆ.

ಗೃಹ ಸಚಿವ ಡಾ.ಜಿ.ಪರಮೇಶ್ವರ್ ಅವರು ಅವರ ಬಳಿ ತೆರಳಿ ಮನವೊಲಿಸುವ ಯತ್ನ ನಡೆಸಿದರಾದರೂ ಅವರು ಒಪ್ಪಿಲ್ಲ. ಖುದ್ದು ಮುಖ್ಯಮಂತ್ರಿ ಸಿದ್ದರಾಮಯ್ಯನವರು ದೂರವಾಣಿ ಕರೆ ಮಾಡಿ ಈ ಸಂದರ್ಭದಲ್ಲಿ ತಾವು ಮತ್ತು ತಮ್ಮ ಆರೋಗ್ಯ ನಮ್ಮ ರಾಜ್ಯಕ್ಕೆ ಅತ್ಯಗತ್ಯವಾಗಿದೆ. ತಾವು ಉಪವಾಸದಿಂದ ಹಿಂದೆ ಸರಿಯಬೇಕು ಎಂದು ಅವರು ಹೇಳಿದ್ದಾರೆ.

► Follow us on –  Facebook / Twitter  / Google+

Sri Raghav

Admin