ಉ.ಪ್ರದೇಶದ ಸರ್ಕಾರಿ ಕಚೇರಿಗಳಲ್ಲಿ ಪಾನ್ ಮಸಾಲಾ, ಗುಟ್ಕಾ ಸೇವನೆ ನಿಷೇಧ
ಲಖನೌ. ಮಾ.22 : ಉತ್ತರ ಪ್ರದೇಶದ ನೂತನ ಸಿಎಂ ಯೋಗಿ ಆದಿತ್ಯನಾಥ್ ದಿನಕ್ಕೊಂದು ಹೊಸ ನಿರ್ಧಾರಗಳನ್ನು ಕೈಗೊಳ್ಳುವ ಮೂಲಕ ಸುದ್ದಿಮಾಡುತ್ತಿದ್ದಾರೆ. ಕಸಾಯಿಖಾನೆಗಳನ್ನು ನಿಷೇಧಿಸಲು ಕಾರ್ಯತಂತ್ರ ರೂಪಿಸಿ ಸಜ್ಜಾಗಿರುವ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಈಗ ಸರ್ಕಾರಿ ಕಚೇರಿಗಳಲ್ಲಿ ಪಾನ್ ಮಸಾಲಾ ಮತ್ತು ಗುಟ್ಕಾ ನಿಷೇಧಿಸಿ ಆದೇಶ ಹೊರಡಿಸಿದ್ದಾರೆ. ಸರ್ಕಾರಿ ಕಚೇರಿಗಳಿಗೆ ಭೇಟಿ ನೀಡಿದಾಗ ಕಚೇರಿಗಳಲ್ಲಿ ಸ್ವಚ್ಛತೆ ಕಾಪಾಡಿಕೊಳ್ಳದಿರುವುದನ್ನು ಕಂಡ ಯೋಗಿ ಈ ನಿರ್ಧಾರ ಕೈಗೊಂಡಿದ್ದಾರೆ ಎನ್ನಲಾಗಿದೆ. ಲಾಲ್ ಬಹದ್ದೂರ್ ಶಾಸ್ತ್ರಿ ಭವನ್ ಎಂದು ಕರೆಯಲ್ಪಡುವ ಕಟ್ಟಡ ಸಮುಚ್ಫಯದಲ್ಲಿ ಮುಖ್ಯಮಂತ್ರಿಯವರ ಅಧಿಕೃತ ನಿವಾಸ, ಕಾರ್ಯಾಲಯ, ರಾಜ್ಯ ಪ್ರಧಾನ ಕಾರ್ಯದರ್ಶಿಗಳ ವಸತಿ ಸೇರಿದಂತೆ ಹಿರಿಯ ಐಎಎಸ್ ಅಧಿಕಾರಿಗಳ ನಿವಾಸವಿದೆ. ಈ ಪ್ರದೇಶದಲ್ಲಿ ಸ್ವಚ್ಛತೆ ಕಾಪಾಡುವಂತೆ ಅಧಿಕಾರಿಗಳಿಗೆ ಸೂಚಿಸಲಾಗಿದೆ.
< Eesanje News 24/7 ನ್ಯೂಸ್ ಆ್ಯಪ್ >