ಎರಡು ಬೈಕ್ಗಳ ಮುಖಾಮುಖಿ ಡಿಕ್ಕಿ : ಒಬ್ಬ ಸಾವು
ಬಾಗೇಪಲ್ಲಿ, ಏ.26- ಎರಡು ದ್ವಿಚಕ್ರ ವಾಹನಗಳು ಮುಖಾಮುಖಿ ಡಿಕ್ಕಿ ಹೊಡೆದ ಪರಿಣಾಮ ಒಬ್ಬ ಸ್ಥಳದಲ್ಲೇ ಸಾವನ್ನಪ್ಪಿ, ಮತ್ತೊಬ್ಬ ಗಂಭೀರವಾಗಿ ಗಾಯಗೊಂಡಿರುವ ಘಟನೆ ಪಟ್ಟಣದ ಗಂಗೋತ್ರಿ ಪೆಟ್ರೋಲ್ ಬಂಕ್ ಬಳಿ ನಡೆದಿದೆ.ಮೃತ ವ್ಯಕ್ತಿಯನ್ನು ಬಾಗೇಪಲ್ಲಿ ತಾಲೂಕಿನ ವಡ್ಡರಪಾಳ್ಯ ಗ್ರಾಮದ ಶ್ರೀನಿವಾಸ್ (35) ಎಂದು ಗುರುತಿಸಲಾಗಿದೆ.ಗಂಭೀರವಾಗಿ ಗಾಯಗೊಂಡಿರುವ ನಂದೀಶ್ (26) ನನ್ನು ಜಿಲ್ಲಾಸ್ಪತ್ರೆಗೆ ದಾಖಲು ಮಾಡಲಾಗಿದೆ.
ರಾಷ್ಟ್ರೀಯ ಹೆದ್ದಾರಿಯಲ್ಲಿನ ಡಾಬಾವೊಂದರಲ್ಲಿ ಕೆಲಸ ಮಾಡುತ್ತಿದ್ದ ಶ್ರೀನಿವಾಸ್ ಕೆಲಸ ಮುಗಿಸಿಕೊಂಡು ರಾತ್ರಿ 11.30ರಲ್ಲಿ ಮನೆಗೆ ತೆರಳುತ್ತಿದ್ದರು. ಈ ವೇಳೆ ಎದುರಿನಿಂದ ಬೈಕ್ನಲ್ಲಿ ಬರುತ್ತಿದ್ದ ನಂದೀಶ್ ಇವರ ವಾಹನಕ್ಕೆ ಡಿಕ್ಕಿ ಹೊಡೆದಿದ್ದಾನೆ ಎಂದು ಪೊಲೀಸರು ತಿಳಿಸಿದ್ದಾರೆ. ಬಾಗೇಪಲ್ಲಿ ಠಾಣೆ ಸರ್ಕಲ್ ಇನ್ಸ್ಪೆಕ್ಟರ್ ನರೇಶ್ ನಾಯಕ್ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.ಗಾಯಗೊಂಡಿರುವ ನಂದೀಶ್ ಪಟ್ರವಾರಿಪಲ್ಲಿ ಗ್ರಾಮದವನಾಗಿದ್ದು, ಬೆಂಗಳೂರಿನಲ್ಲಿ ಕೆಲಸ ಮಾಡುತ್ತಿದ್ದ ಎಂದು ತಿಳಿದುಬಂದಿದೆ.
< Eesanje News 24/7 ನ್ಯೂಸ್ ಆ್ಯಪ್ >