ಎಸ್ಸಿ-ಎಸ್ಟಿ ವಿದ್ಯಾರ್ಥಿಗಳಿಗೆ ಉಚಿತ ಲ್ಯಾಪ್‍ಟಾಪ್

Spread the love

Free-Laptom

ಬೆಂಗಳೂರು, ನ.2- ಮೆಡಿಕಲ್, ಇಂಜಿನಿಯರಿಂಗ್ ಸೇರಿದಂತೆ ಉನ್ನತ ಶಿಕ್ಷಣ ವ್ಯಾಸಂಗ ಮಾಡುತ್ತಿರುವ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡ ವಿದ್ಯಾರ್ಥಿಗಳಿಗೆ ಲ್ಯಾಪ್‍ಟಾಪ್ ನೀಡಲಾಗುವುದು ಎಂದು ಸಚಿವ ಎಚ್.ಆಂಜನೇಯ ತಿಳಿಸಿದರು. ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಮೆಡಿಕಲ್, ಇಂಜಿನಿಯರಿಂಗ್ ಮತ್ತು ಪಿಎಚ್‍ಡಿ ಸೇರಿದಂತೆ ಉನ್ನತ ವ್ಯಾಸಂಗ ಮಾಡುತ್ತಿರುವ ವಿದ್ಯಾರ್ಥಿಗಳಿಗೆ ಲ್ಯಾಪ್‍ಟಾಪ್ ನೀಡಲು ಟೆಂಡರ್ ಕರೆಯಲಾಗುವುದು ಎಂದರು. ಪರಿಶಿಷ್ಟ ಜಾತಿಮತ್ತು ಪಂಗಡ ಉಪಯೋಜನೆ ಕಾಯ್ದೆಯಡಿ ಒದಗಿಸಲಾಗಿರುವ 19 ಸಾವಿರ ಕೋಟಿ ಅನುದಾನವನ್ನು ಮಾರ್ಚ್‍ವೊಳಗೆ ಬಳಕೆ ಮಾಡಿಕೊಳ್ಳಲಾಗುವುದು. ವಿದ್ಯಾರ್ಥಿಗಳಿಗೆ ಹಾಸ್ಟೆಲ್ ನಿರ್ಮಾಣ, ವಿದ್ಯಾಸಿರಿ ಯೋಜನೆಯಡಿ ಒಂದು ಲಕ್ಷ ವಿದ್ಯಾರ್ಥಿಗಳಿಗೆ ಮಾಸಿಕ 1500 ರೂ.ಗಳಂತೆ ನೆರವು ನೀಡಲಾಗುವುದು ಎಂದರು. ಎಸ್‍ಇಪಿ, ಟಿಎಸ್‍ಪಿ ಯೋಜನೆ ಹಣ ಬಳಕೆ ಮಾಹಿತಿ ಯನ್ನು ವೆಬ್‍ಸೈಟ್‍ನಲ್ಲಿ ಅಳವಡಿಸಲಾಗುವುದು. ಅಲ್ಲದೆ, ಹನಿನೀರಾವರಿ, ಟ್ರ್ಯಾಕ್ಟರ್ ಖರೀದಿ ಸಹಾಯಧನ ಹಣ ನೀಡಲು ಬಳಸಲಾಗುವುದು.

ತಿಂಗಳಾಂತ್ಯಕ್ಕೆ ಸಭೆ:

ಹಿಂದುಳಿದ ವರ್ಗಗಳ ಆಯೋಗದ ಮೂಲಕ ನಡೆಸಲಾಗಿರುವ ಸಾಮಾಜಿಕ, ಶೈಕ್ಷಣಿಕ ವರದಿ ಬಗ್ಗೆ ನವೆಂಬರ್ ಅಂತ್ಯದಲ್ಲಿ ಮುಖ್ಯಮಂತ್ರಿಗಳು ಪರಿಶೀಲನಾ ಸಭೆ ನಡೆಸಲಿದ್ದಾರೆ.ಆ ಸಭೆ ನಂತರ ವರದಿ ಸಲ್ಲಿಕೆಗೆ ಕ್ರಮ ಕೈಗೊಳ್ಳಲಾಗುವುದು ಎಂದರು.

► Follow us on –  Facebook / Twitter  / Google+

Facebook Comments

Sri Raghav

Admin