ಐಎಎಸ್ ಅಧಿಕಾರಿ ಡಿ.ಕೆ.ರವಿ ಆತ್ಮಹತ್ಯೆಗೆ ಮಾನಸಿಕ ಒತ್ತಡವೇ ಕಾರಣ : ಪರಮೇಶ್ವರ್

Paramewshr

ಬೆಳಗಾವಿ,ಡಿ.3-ಐಎಎಸ್ ಅಧಿಕಾರಿ ಡಿ.ಕೆ.ರವಿ ಆತ್ಮಹತ್ಯೆಗೆ ಮಾನಸಿಕ ಒತ್ತಡವೇ ಕಾರಣ ಎಂಬುದು ಸಿಬಿಐ ವರದಿಯಲ್ಲಿ ದಾಖಲಾಗಿದೆ ಎಂದು ಗೃಹ ಸಚಿವ ಡಾ.ಜಿ.ಪರಮೇಶ್ವರ್ ವಿಧಾನಪರಿಷತ್‍ನಲ್ಲಿ ತಿಳಿಸಿದ್ದಾರೆ.  ಸಭಾಪತಿ ಡಿ.ಎಚ್.ಶಂಕರಮೂರ್ತಿ ಅವರ ಸೂಚನೆ ಮೇರೆಗೆ ಸಿಬಿಐ ನೀಡಿದ್ದ ತನಿಖಾ ವರದಿಯನ್ನು ಡಾ.ಜಿ.ಪರಮೇಶ್ವರ್ ಅವರು ಇಂದು ವಿಧಾನಪರಿಷತ್‍ನಲ್ಲಿ ಮಂಡಿಸಿದರು.  ಸಿಬಿಐ ವರದಿಯಲ್ಲಿ ದಾಖಲಾಗಿರುವಂತೆ 18-03-2015ರಂದು ಆತ್ಮಹತ್ಯೆ ಮಾಡಿಕೊಂಡಿದ್ದ ಐಎಎಸ್ ಅಧಿಕಾರಿ ಡಿ.ಕೆ.ರವಿ ಮಾನಸಿಕ ಒತ್ತಡದಿಂದ ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ತನಿಖೆಯಲ್ಲಿ ಈಗಾಗಲೇ ಸಾಬೀತಾಗಿದೆ.

ವೈದ್ಯಕೀಯ, ವಿಧಿವಿಜ್ಞಾನ ಪ್ರಯೋಗಗಳ ವರದಿ ಹಾಗೂ ತನಿಖಾ ವೇಳೆ ಎಲ್ಲಾ ಸಾಕ್ಷ್ಯಾಧಾರ ಹೇಳಿಕೆಗಳನ್ನು ಕ್ರೋಢೀಕರಿಸಿ ಈ ವರದಿಯನ್ನು ಸಿದ್ದಪಡಿಸಿದ್ದು , ಅವರ ಆತ್ಮಹತ್ಯೆಗೆ ಮಾನಸಿಕ ಒತ್ತಡವೇ ಕಾರಣ ಹೊರತು ಬೇರೆ ಯಾವುದೇ ಕಾರಣ ಇಲ್ಲ ಎಂದು ಅವರು ಸ್ಪಷ್ಟಪಡಿಸಿದ್ದಾರೆ.  ಡಿ.ಕೆ.ರವಿ ಆತ್ಮಹತ್ಯೆಗೆ ಪ್ರಕರಣಕ್ಕೆ ಸಂಬಂಧಿಸಿದಂತೆ ತನಿಖೆಯನ್ನು ಸಿಬಿಐ ತನಿಖೆ ನಡೆಸಿ ಅಂತಿಮ ವರದಿಯನ್ನು ನ.24ರಂದು ಬೆಂಗಳೂರು ದಕ್ಷಿಣ ವಿಭಾಗದ ದಂಡಾಧಿಕಾರಿಗೆ ಸಲ್ಲಿಸಿದ್ದಾರೆ.  ಅಲ್ಲದೆ ಐಪಿಸಿ ಸೆಕ್ಷನ್ 176ರ ಪ್ರಕಾರ ತನಿಖೆಯನ್ನು ಪೂರ್ಣಗೊಳಿಸಿದ್ದಾರೆ ಎಂದು ಪರಮೇಶ್ವರ್ ತಿಳಿಸಿದರು.  ಸಾರ್ವಜನಿಕರ ಹಿತದೃಷ್ಟಿಯಿಂದ ಸರ್ಕಾರವು ಡಿ.ಕೆ.ರವಿ ಸಾವಿನ ಪ್ರಕರಣವನ್ನು ಸಿಬಿಐಗೆ ವಹಿಸಲಾಗಿತ್ತು.

> ಯಾವ ಸುದ್ದಿಯನ್ನೂ ಮಿಸ್ ಮಾಡ್ಕೋಬೇಡಿ… :  Eesanje News 24/7 ನ್ಯೂಸ್ ಆ್ಯಪ್ –  Click Here to Download 

Sri Raghav

Admin