ಐಟಿ ದಾಳಿಗೆ ಕಾಂಗ್ರೆಸ್ ಮುಖಂಡರು ತೀವ್ರ ಆಕ್ಷೇಪ

Spread the love

INCOME-TAX
ಬೆಂಗಳೂರು,ಮೇ 8-ನಿನ್ನೆ ರಾಜ್ಯದ ವಿವಿಧೆಡೆಗಳಲ್ಲಿ ನಡೆದಿರುವ ಆದಾಯ ತೆರಿಗೆ ದಾಳಿಗೆ ಕಾಂಗ್ರೆಸ್ ಮುಖಂಡರು ತೀವ್ರ ಆಕ್ಷೇಪ ವ್ಯಕ್ತಪಡಿಸಿದ್ದಾರೆ. ಕೆಪಿಸಿಸಿ ಕಚೇರಿಯಲ್ಲಿ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಕೇಂದ್ರದ ಮಾಜಿ ಹಣಕಾಸು ಸಚಿವ ಪಿ.ಚಿದಂಬರಂ, ಆದಾಯ ತೆರಿಗೆ ಇಲಾಖೆ ಕೇಂದ್ರ ಸರ್ಕಾರದ ಕೈಗೊಂಬೆಯಂತೆ ವರ್ತಿಸುತ್ತಿದೆ. ಇದು ಸರಿಯಲ್ಲ. ಜನ ಪ್ರಶ್ನೆ ಕೇಳುವ ವಾತಾವರಣ ನಿರ್ಮಾಣವಾಗುತ್ತಿದೆ. ಸರ್ಕಾರಿ ಸಂಸ್ಥೆಗಳು ವಿಶ್ವಾಸಾರ್ಹತೆಯನ್ನು ಕಳೆದುಕೊಳ್ಳುತ್ತಿದೆ ಎಂದು ಅಸಮಾಧಾನ ವ್ಯಕ್ತಪಡಿಸಿದರು.

ಕೆಪಿಸಿಸಿ ಕಾಯಾಧ್ಯಕ್ಷ ದಿನೇಶ್ ಗುಂಡೂರಾವ್ ಮಾತನಾಡಿ, ಆದಾಯ ತೆರಿಗೆ ಇಲಾಖೆ ಬಿಜೆಪಿ ಪಕ್ಷದ ಐಟಿ ಘಟಕದಂತೆ ವರ್ತಿಸುತ್ತಿದೆ ಎಂದು ತಿರುಗೇಟು ನೀಡಿದರು. ಕಾಂಗ್ರೆಸ್ ಮುಖಂಡರನ್ನು ಗುರಿಯಾಗಿಸಿಕೊಂಡು ಐಟಿ ದಾಳಿ ನಡೆಯುತ್ತಿದೆ. ಇದುವರೆಗೂ ಬಿಜೆಪಿಯ ಯಾವುದೇ ಮುಖಂಡರ ಮೇಲೂ ಐಟಿ ದಾಳಿ ನಡೆದಿಲ್ಲ. ಇದು ಪಕ್ಷಪಾತದ ಸ್ಪಷ್ಟ ನಿದರ್ಶನ ಎಂದ ಅವರು, ಕಾಂಗ್ರೆಸ್ ಚುನಾವಣಾ ಆಯೋಗಕ್ಕೆ ದೂರು ನೀಡಲಿದ್ದು, ಪಕ್ಷಪಾತ ಮಾಡುತ್ತಿರುವ ಆದಾಯ ತೆರಿಗೆ ಅಧಿಕಾರಿಗಳನ್ನು ವರ್ಗಾವಣೆ ಮಾಡುವಂತೆ ಮನವಿ ಮಾಡುವುದಾಗಿ ಹೇಳಿದರು.

Facebook Comments

Sri Raghav

Admin