ಒಗ್ಗಟ್ಟಿನ ಮಂತ್ರ ಉಪದೇಶಿಸಿದ ದೇವೇಗೌಡರು

devegowda

ಬೆಂಗಳೂರು, ಸೆ.22- ರಾಜ್ಯದ ನೆಲ, ಜಲದ ವಿಚಾರದಲ್ಲಿ ಎಲ್ಲ ಪಕ್ಷಗಳ ನಾಯಕರು ಒಟ್ಟಾಗಿರಬೇಕೆಂದು ಜೆಡಿಎಸ್ ರಾಷ್ಟ್ರೀಯ ಅಧ್ಯಕ್ಷ ಹಾಗೂ ಮಾಜಿ ಪ್ರಧಾನಿ ಎಚ್.ಡಿ.ದೇವೇಗೌಡರು ಮನವಿ ಮಾಡಿದ್ದಾರೆ.  ಕಾವೇರಿ ನದಿ ವಿಚಾರದಲ್ಲಿ ರಾಜ್ಯದ ಹಿತ ಕಾಪಾಡಲು ಪಕ್ಷಭೇದ ಮರೆತು ಒಗ್ಗಟ್ಟಾಗಿರಬೇಕೆಂದು ಬಿಜೆಪಿ ನಾಯಕರಲ್ಲಿ ಮನವಿ ಮಾಡಲಾಗಿದೆ ಎಂದು ಹೇಳಿದ್ದಾರೆ.
ಬಿಜೆಪಿ ರಾಜ್ಯಾಧ್ಯಕ್ಷ ಬಿ.ಎಸ್.ಯಡಿಯೂರಪ್ಪ, ವಿಧಾನಸಭೆ ವಿರೋಧ ಪಕ್ಷದ ನಾಯಕ ಜಗದೀಶ್ ಶೆಟ್ಟರ್, ವಿಧಾನ ಪರಿಷತ್ ವಿರೋಧ ಪಕ್ಷದ ನಾಯಕ ಕೆ.ಎಸ್.ಈಶ್ವರಪ್ಪ ಅವರೊಂದಿಗೆ ಗೌಡರು ದೂರವಾಣಿ ಮೂಲಕ ಮಾತನಾಡಿ ಮನವಿ ಮಾಡಿದ್ದಾರೆ.

► Follow us on –  Facebook / Twitter  / Google+

Sri Raghav

Admin