ಕಠಿಣ ಶ್ರಮದಿಂದ ಉನ್ನತ ಸ್ಥಾನ ಪಡೆಯಲು ವಿದ್ಯಾರ್ಥಿಗಳಿಗೆ ಸಲಹೆ

ee-sanje

 

ಕೆ.ಆರ್.ಪೇಟೆ, ಆ.19- ಮಕ್ಕಳು ಕಠಿಣ ಪರಿಶ್ರಮದಿಂದ ವಿದ್ಯಾಭ್ಯಾಸ ಮಾಡಿ ಉನ್ನತ ಸ್ಥಾನ-ಮಾನ ಪಡೆಯಬೇಕು ಎಂದು ತಾಲ್ಲೂಕು ಪಂಚಾಯಿತಿ ಸದಸ್ಯ ಬಿ.ಎನ್.ದಿನೇಶ್ ಸಲಹೆ ನೀಡಿದರು.ತಾಲೂಕಿನ ಸಂತೇಬಾಚಹಳ್ಳಿ ಹೋಬಳಿಯ ರಂಗನಾಥಪುರ ಗ್ರಾಮದ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯ ಹಮ್ಮಿಕೊಂಡಿದ್ದ ಉಚಿತ ಸ್ಕೂಲ್ ಬ್ಯಾಗ್ ಮತ್ತು ಲೇಖನ ಸಾಮಗ್ರಿಗಳನ್ನು ವಿತರಣೆ ಕಾರ್ಯಕ್ರಮದಲ್ಲಿ ಪಾಲ್ಗೊಂಡು ಅವರು ಮಾತನಾಡಿದರು. ಶಾಲಾ ಹಂತದಲ್ಲಿ ವಿದ್ಯಾರ್ಥಿಗಳು ಕೇವಲ ವಿದ್ಯಾಭ್ಯಾಸದ ಕಡೆ ಹೆಚ್ಚು ಗಮನ ಹರಿಸಬೇಕು.

ಓದುವ ವೇಳೆಯಲ್ಲಿ ಬೇರೆ ಕಡೆ ಆಕರ್ಷಿತರಾಗಬಾರದು. ಪ್ರಾಥಮಿಕ ಶಾಲಾ ಹಂತವು ಉತ್ತಮ ಶಿಕ್ಷಣ ಪಡೆಯಲು ಭುನಾದಿಯಾಗಿದೆ. ಇಲ್ಲಿ ಉತ್ತಮ ಶಿಕ್ಷಣ ಪಡೆದುಕೊಳ್ಳುವುದರಿಂದ ಉನ್ನತ ಶಿಕ್ಷಣದಲ್ಲಿ ಉತ್ತಮ ಅಂಕಗಳನ್ನು ಪಡೆದು ಉತ್ತೀರ್ಣ ಹೊಂದಲು ಸಾಧ್ಯವಾಗುತ್ತದೆ ಎಂದರು.  ಸರ್ಕಾರಿ ಶಾಲೆಗಳ ಬಗ್ಗೆ ಎಸ್.ಡಿ.ಎಂ.ಸಿ. ಅಧ್ಯಕ್ಷರು ಮತ್ತು ಸದಸ್ಯರು ಹೆಚ್ಚು ಕಾಳಜಿ ವಹಿಸಬೇಕು. ತಮ್ಮ ಶಾಲೆಯಲ್ಲಿ ಗುಣಮಟ್ಟದ ಶಿಕ್ಷಣ ದೊರೆಯುತ್ತಿದೆಯೇ, ಶಿಕ್ಷಕರು ಸರಿಯಾಗಿ ಶಾಲೆಗೆ ಬರುತ್ತಿದ್ದಾರೆಯೇ ಶಾಲೆಯಲ್ಲಿ ಏನೇನು ಕೊರತೆ ಇದೆ ಎಂಬುದನ್ನು ತಿಳಿದುಕೊಂಡು ಜನಪ್ರತಿನಿಧಗಳಾದ ನಮ್ಮ ಗಮನಕ್ಕೆ ತಂದರೆ ಅದನ್ನು ಸರಿಪಡಿಸಿ ಗುಣಮಟ್ಟದ ಶಿಕ್ಷಣ ದೊರಕಿಸಿಕೊಡಲು ಪೂರಕ ವಾತಾವರಣವನ್ನು ಸೃಷ್ಟಿಸಿಕೊಡಲು ಶ್ರಮಿಸುವುದಾಗಿ ಹೇಳಿದರು. ಮುಖ್ಯ ಶಿಕ್ಷಕಿ ಸಾವಿತ್ರಮ್ಮ, ಗ್ರಾಪಂ ಅಧ್ಯಕ್ಷೆ ಲಕ್ಷ್ಮಮ್ಮ, ಸಾಕ್ಷರ ಭಾರತ್ ಯೋಜನೆಯ ತಾಲೂಕು ಸಂಯೋಜಕ ಲೋಕೇಶ್, ಸಂಪನ್ಮೂಲ ವ್ಯಕ್ತಿ ಮಂಜೇಗೌಡ ಇತರರು ಭಾಗವಹಿಸಿದ್ದರು.

 

► Follow us on –  Facebook / Twitter  / Google+

Sri Raghav

Admin