ಕತ್ತು ಹಿಸುಕಿ ಪತ್ನಿ ಕೊಲೆ
ತುಮಕೂರು,ಆ.27-ಕೌಟುಂಬಿಕ ಕಲಹ ಹಿನ್ನೆಲೆಯಲ್ಲಿ ಪತಿಯೇ ಪತ್ನಿಯ ಕತ್ತು ಹಿಸುಕಿ ಕೊಲೆ ಮಾಡಿರುವ ಘಟನೆ ತಿಲಕ್ಪಾರ್ಕ್ ಠಾಣೆ ವ್ಯಾಪ್ತಿಯ ರಾಜೀವ್ಗಾಂಧಿ ನಗರದಲ್ಲಿ ನಡೆದಿದೆ. ಶಾಜಿಯ(22) ಕೊಲೆಯಾದ ಪತ್ನಿ. ಮೆಳಕೋಟೆ ಶಾಜಿಯಾಳನ್ನು ರಾಜೀವ್ಗಾಂಧಿ ನಗರದ ರಫೀಕ್ನಿಗೆ ಕೊಟ್ಟು ಕಳೆದ ಒಂದು ವರ್ಷದ ಹಿಂದೆ ವಿವಾಹ ಮಾಡಿಕೊಡಲಾಗಿತ್ತು. ದಂಪತಿಗೆ ಮಕ್ಕಳಿರಲಿಲ್ಲ. ಪ್ರಾರಂಭದಲ್ಲಿ ಚೆನ್ನಾಗಿಯೇ ಇದ್ದ ಇವರ ಕುಟುಂಬ ಇತ್ತೀಚೆಗೆ ಬಿರುಕು ಕಾಣಿಸಿಕೊಂಡಿದ್ದು ಆಗಾಗ್ಗೆ ಜಗಳ ನಡೆಯುತ್ತಿತ್ತು ಎನ್ನಲಾಗಿದೆ. ರಾತ್ರಿಯೂ ಸಹ ಇವರ ಇಬ್ಬರ ನಡುವೆ ಕ್ಷುಲ್ಲಕ ವಿಚಾರಕ್ಕೆ ಜಗಳ ನಡೆದು ಪತಿ ಕತ್ತು ಹಿಸುಕಿ ಕೊಲೆ ಮಾಡಿದ್ದಾನೆ ಎನ್ನಲಾಗಿದೆ. ಸ್ಥಳಕ್ಕೆ ಎಸ್ಐ ರಾಜು, ಸಿಪಿಐ ರಾಘವೇಂದ್ರ ಭೇಟಿ ನೀಡಿ ಪರಿಶೀಲನೆ ನಡೆಸಿ ಮುಂದಿನ ಕ್ರಮ ಕೈಗೊಂಡಿದ್ದಾರೆ.