ಕರ್ನಾಟಕದಲ್ಲಿ ಬಾಹುಬಲಿ-2 ಚಿತ್ರ ಪ್ರದರ್ಶಿಸದಂತೆ ವಾಟಾಳ್ ಪ್ರತಿಭಟನೆ
ಬೆಂಗಳೂರು,ಮಾ.23-ಕನ್ನಡ ವಿರೋಧಿ ತೆಲುಗು ನಟ ಸತ್ಯರಾಜ್ ನಟಿಸಿರುವ ಬಾಹುಬಲಿ-2 ಚಿತ್ರವನ್ನು ಯಾವುದೇ ಕಾರಣಕ್ಕೂ ರಾಜ್ಯದಲ್ಲಿ ಪ್ರದರ್ಶನ ಮಾಡಬಾರದೆಂದು ಆಗ್ರಹಿಸಿ ಕನ್ನಡ ಚಳುವಳಿ ವಾಟಾಳ್ ಪಕ್ಷದ ಅಧ್ಯಕ್ಷ ವಾಟಾಳ್ ನಾಗರಾಜ್ ನೇತೃತ್ವದಲ್ಲಿ ಕನ್ನಡ ಒಕ್ಕೂಟದ ವತಿಯಿಂದ ಮೈಸೂರು ಬ್ಯಾಂಕ್ ವೃತ್ತದಲ್ಲಿ ಇಂದು ಪ್ರತಿಭಟನೆ ನಡೆಸಲಾಯಿತು. ಕನ್ನಡ ಸೇನೆಯ ಕೆ.ಆರ್.ಕುಮಾರ, ಕರವೇ ವೇದಿಕೆ ಶಿವರಾಮೇಗೌಡ, ಪ್ರವೀಣ್ ಕುಮಾರ್ ಶೆಟ್ಟಿ , ಕನ್ನಡ ಜಾಗೃತಿ ವೇದಿಕೆಯ ರಾಜ್ಯಾಧ್ಯಕ್ಷ ಮಂಜುನಾಥ್ ದೇವು, ಗಿರೀಶ್ ಗೌಡ ಸೇರಿದಂತೆ ಹಲವರ ನೇತೃತ್ವದಲ್ಲಿ ಇಂದು ಪ್ರತಿಭಟನೆ ನಡೆಸಿ ಬಾಹುಬಲಿ-2 ತೆಲುಗು ಚಿತ್ರದ ಭೂತದಹನ ಮಾಡಲಾಯಿತು.
ಕಾವೇರಿ ಹೋರಾಟದ ಸಂದರ್ಭದಲ್ಲಿ ಕರ್ನಾಟಕದ ವಿರುದ್ಧ ಸತ್ಯರಾಜ್ ಅವರ ಕನ್ನಡ ವಿರೋಧಿ ಧೋರಣೆಯನ್ನು ಈ ಸಂದರ್ಭದಲ್ಲಿ ವಾಟಾಳ್ ಖಂಡಿಸಿದರು. ಅವರ ಚಿತ್ರಕ್ಕೆ ಕರ್ನಾಟಕದಲ್ಲಿ ಯಾವುದೇ ಕಾರಣಕ್ಕೂ ಅವಕಾಶ ನೀಡಬಾರದು ಎಂದು ಒತ್ತಾಯಿಸಿದರು. ಸತ್ಯರಾಜ್ ಅವರ ಚಿತ್ರ ಪ್ರದರ್ಶನ ಮಾಡಿದರೆ ಕನ್ನಡಪರ ಸಂಘಟನೆಗಳಿಂದ ಉಗ್ರ ಹೋರಾಟ ಮಾಡಬೇಕಾಗುತ್ತದೆ ಎಂಬ ಎಚ್ಚರಿಕೆ ನೀಡಿದರು.
< Eesanje News 24/7 ನ್ಯೂಸ್ ಆ್ಯಪ್ >
Click Here to Download : Android / iOS