ಕಾಂಗ್ರೆಸ್ ಶಾಸಕ ಜಿ.ಎಚ್.ಶ್ರೀನಿವಾಸ್ ರಾಜೀನಾಮೆ

Srinivas--01

ಬೆಂಗಳೂರು, ಏ.19- ಕಾಂಗ್ರೆಸ್ ಶಾಸಕ ಜಿ.ಎಚ್.ಶ್ರೀನಿವಾಸ್ ತಮ್ಮ ಶಾಸಕ ಸ್ಥಾನಕ್ಕೆ ರಾಜೀನಾಮೆ ನೀಡಿದ್ದಾರೆ. ವಿಧಾನಸಭಾಧ್ಯಕ್ಷ ಕೆ.ಬಿ.ಕೋಳಿವಾಡ ಅವರಿಗೆ ಇಂದು ತಮ್ಮ ರಾಜೀನಾಮೆ ಪತ್ರ ಸಲ್ಲಿಸಿರುವ ಶ್ರೀನಿವಾಸ್ ತಕ್ಷಣವೇ ಅಂಗೀಕರಿಸುವಂತೆ ಸಭಾಧ್ಯಕ್ಷರಲ್ಲಿ ಮನವಿ ಮಾಡಿದ್ದಾರೆ.
ಚಿಕ್ಕಮಗಳೂರು ಜಿಲ್ಲೆ ತರೀಕೆರೆ ವಿಧಾನಸಭಾ ಕ್ಷೇತ್ರದ ಶಾಸಕರಾಗಿದ್ದ ಶ್ರೀನಿವಾಸ್ ವಿಧಾನಸಭೆ ಚುನಾವಣೆಯಲ್ಲಿ ಸ್ಪರ್ಧಿಸಲು ಕಾಂಗ್ರೆಸ್ ಟಿಕೆಟ್ ಆಕಾಂಕ್ಷಿಯಾಗಿದ್ದರು.

ಕಾಂಗ್ರೆಸ್ ಪಕ್ಷದ ಟಿಕೆಟ್ ದೊರೆಯದಿರುವುದರಿಂದ ಶಾಸಕ ಸ್ಥಾನಕ್ಕೆ ರಾಜೀನಾಮೆ ನೀಡಿ ಜೆಡಿಎಸ್ ಪಕ್ಷ ಸೇರಿದ್ದಾರೆ. ತರೀಕೆರೆ ವಿಧಾನಸಭಾ ಕ್ಷೇತ್ರದಿಂದ ಜೆಡಿಎಸ್ ಅಭ್ಯರ್ಥಿಯಾಗಿ ಸ್ಪರ್ಧಿಸಲಿದ್ದಾರೆ.   ಕಾಂಗ್ರೆಸ್ ಶಾಸಕರಾಗಿದ್ದ ಜಿ.ಎಚ್.ಶ್ರೀನಿವಾಸ್ ಅವರಿಗೆ ಕೊನೆ ಕ್ಷಣದಲ್ಲಿ ಟಿಕೆಟ್ ಕೈ ತಪ್ಪಿದ ಹಿನ್ನೆಲೆಯಲ್ಲಿ ಬೇಸತ್ತ ಅವರು ನಿನ್ನೆ ತಮ್ಮ ಬೆಂಬಲಿಗರೊಂದಿಗೆ ಚರ್ಚಿಸಿ ಸೇರುವ ನಿರ್ಧಾರ ಕೈಗೊಂಡಿದ್ದರು.

Sri Raghav

Admin