ಕಾಡಾನೆ ದಾಳಿಗೆ ಕಾಲೇಜು ಯುವತಿ ಬಲಿ
ಕೊಡಗು, ಮಾ.24- ಒಂಟಿ ಸಲಗದ ಹಾವಳಿಗೆ ವಿದ್ಯಾರ್ಥಿನಿ ಬಲಿಯಾಗಿರುವ ಘಟನೆ ವಿರಾಜಪೇಟೆ ತಾಲೂಕು ಪಾಲಿ ಬೆಟ್ಟದ ತಾರೆಕಟ್ಟೆಯಲ್ಲಿ ನಡೆದಿದೆ. ಗೋಣಿಕೊಪ್ಪ ಕಾವೇರಿ ಕಾಲೇಜಿನಲ್ಲಿ ವ್ಯಾಸಂಗ ಮಾಡುತ್ತಿದ್ದ ದ್ವಿತೀಯ ಬಿಕಾಂ ವಿದ್ಯಾರ್ಥಿನಿ ಸುಫಾನಾ (19) ಮೃತ ದುರ್ದೈವಿ. ಕಾಲೇಜಿಗೆ ತೆರಳುತ್ತಿದ್ದ ವೇಳೆ ಒಂಟಿ ಸಲಗ ಈಕೆ ಮೇಲೆ ದಾಳಿ ಮಾಡಿದಾಗ ಸ್ಥಳದಲ್ಲೇ ಮೃತಪಟ್ಟಿದ್ದಾಳೆ. ಅರಣ್ಯಾಧಿಕಾರಿಗಳು ಭೇಟಿ ನೀಡಿ ಮುಂದಿನ ಕ್ರಮ ಜರುಗಿಸಿದ್ದಾರೆ.
ಕೊಡಗು ಜಿಲ್ಲೆಯಲ್ಲಿ ಕಾಡಾನೆಗಳ ಉಪಟಳ ಹೆಚ್ಚಾಗಿದೆ. ಸಿದ್ದಾಪುರ ವ್ಯಾಪ್ತಿಯಲ್ಲಿ ಆನೆ ಹಾವಳಿ ತೀವ್ರಗೊಂಡಿದೆ. ಪಟ್ಟದಹಳ್ಳ, ಹೊಸಕೆರೆ, ಹೆರೂರು, ಎಮ್ಮೆಗುಂಡಿ ಗ್ರಾಮಗಳ ವ್ಯಾಪ್ತಿಯಲ್ಲಿ ಕಾಡಾನೆಗಳು ಬೀಡು ಬಿಟ್ಟಿರುವುದರಿಂದ ಗ್ರಾಮಸ್ಥರು, ಕಾರ್ಮಿಕರು, ಶಾಲಾ ಮಕ್ಕಳು ಆತಂಕಕ್ಕೊಳಗಾಗಿದ್ದು, ಅರಣ್ಯ ಸಿಬ್ಬಂದಿ ಕಾಡಾನೆಗಳನ್ನು ಓಡಿಸಲು ಹರಸಾಹಸ ಪಡುತ್ತಿದ್ದಾರೆ. ಈ ನಡುವೆ ವಿದ್ಯಾರ್ಥಿನಿಯೊಬ್ಬಳು ಬಲಿಯಾಗಿರುವುದು ಜನರಲ್ಲಿ ತೀವ್ರ ಆತಂಕ ಮೂಡಿಸಿದೆ.
< Eesanje News 24/7 ನ್ಯೂಸ್ ಆ್ಯಪ್ >