ಕಾನೂನು ಬಾಹಿರ ಕಟ್ಟಡ ನಿರ್ಮಿಸಿದರೆ ಎಂಜಿನಿಯರ್‍ಗೆ ಜೈಲು..!

Engineer

ಬೆಂಗಳೂರು, ಅ.19- ನಗರದಲ್ಲಿ ಕಾನೂನು ಬಾಹಿರವಾಗಿ ಕಟ್ಟಡ ನಿರ್ಮಾಣಗೊಂಡರೆ ಸಂಬಂಧಪಟ್ಟ ಬಿಬಿಎಂಪಿ ಇಂಜಿನಿಯರ್‍ಗಳಿಗೆ ಎರಡು ವರ್ಷ ಜೈಲು ಶಿಕ್ಷೆ ವಿಧಿಸುವಂತೆ ಕಾನೂನು ತಿದ್ದುಪಡಿ ಮಾಡಲು ಸರ್ಕಾರಕ್ಕೆ ಪ್ರಸ್ತಾವನೆ ಸಲ್ಲಿಸಲಾಗು ವುದು ಎಂದು ಪಾಲಿಕೆ ಆಯುಕ್ತ ಮಂಜುನಾಥ ಪ್ರಸಾದ್ ಇಂದಿಲ್ಲಿ ತಿಳಿಸಿದರು.ಒತ್ತುವರಿ ಕಾರ್ಯಾಚರಣೆ ಸ್ಥಗಿತಗೊಳಿಸಿದ್ದರೆ ತಕ್ಷಣದಿಂದ ತ್ವರಿತಗೊಳಿಸಬೇಕು ಎಂದು ಭೂ ಒತ್ತುವರಿ ವಿರೋಧಿ ಹೋರಾಟ ಗಾರರಾದ ದೊರೆಸ್ವಾಮಿ, ಎ.ಟಿ. ರಾಮಸ್ವಾಮಿ, ಕೆ.ಆರ್. ಪೇಟೆ ಕೃಷ್ಣ ಮತ್ತಿತರ ಪದಾಧಿಕಾರಿಗಳು ಸಲ್ಲಿಸಿದ್ದ ಮನವಿಯನ್ನು ಸ್ವೀಕರಿಸಿ ಮಾತನಾಡಿದ ಅವರು, ರಾಜಕಾಲುವೆ ಒತ್ತುವರಿ ತೆರವನ್ನು ಮುಂದಿನ ಎರಡು ತಿಂಗಳು ನಿರಂತರವಾಗಿ ನಡೆಯಲಿದೆ.

ರಾಜಕಾಲುವೆ ಒತ್ತುವರಿ ತೆರವು ಈ ವಾರದಿಂದ ಮತ್ತೆ ಆರಂಭವಾಗಲಿದೆ. ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ನಿರ್ದೇಶನದ ಮೇರೆಗೆ ಒತ್ತುವರಿ ತೆರವು ಕಾರ್ಯ ನಡೆಸಲಾಗುತ್ತಿದೆ.ಕಟ್ಟಡ ನಕ್ಷೆಗೆ ವಿರುದ್ಧವಾಗಿ ಕಟ್ಟಡ ನಿರ್ಮಿಸಿದರೆ ಅದಕ್ಕೆ ಅವಕಾಶ ನೀಡಿದ ಇಂಜಿನಿಯರ್‍ಗಳಿಗೆ ಎರಡು ವರ್ಷ ಜೈಲು ಶಿಕ್ಷೆ ವಿಧಿಸುವಂತೆ ಕಾನೂನು ತಿದ್ದುಪಡಿ ತರಲು ಸರ್ಕಾರಕ್ಕೆ ಪ್ರಸ್ತಾವನೆ ಸಲ್ಲಿಸಲಾಗುವುದು ಎಂದರು.

 

► Follow us on –  Facebook / Twitter  / Google+

 

Sri Raghav

Admin