ಕಾರು-ಬೈಕ್ ಡಿಕ್ಕಿ : ಸವಾರ ಸಾವು
ಹಾಸನ, ಫೆ.5- ಕಾರು ಹಾಗೂ ಬೈಕ್ ನಡುವೆ ನಡೆದ ಅಪಘಾತದಲ್ಲಿ ಯುವಕನೊಬ್ಬ ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ಜಿಲ್ಲೆಯ ಚನ್ನರಾಯಪಟ್ಟಣ ತಾಲ್ಲೂಕಿನ ಚಿಕ್ಕಹೊನ್ನಹಳ್ಳಿ ಬಳಿ ಇಂದು ಬೆಳಗ್ಗೆ ನಡೆದಿದೆ.ಬೈಕ್ನಲ್ಲಿ ಹಾಸನಕ್ಕೆ ತೆರಳುತ್ತಿದ್ದ ಚೇತನ್ ಮತ್ತು ಆತನ ಸ್ನೇಹಿತ ಚಿಕ್ಕಹೊನ್ನೂರು ಬಳಿಯ ತಿರುವಿನಲ್ಲಿ ವೇಗವಾಗಿ ಬಂದ ಕಾರೊಂದು ಡಿಕ್ಕಿ ಹೊಡೆದಿದೆ. ತೀವ್ರವಾಗಿ ಗಾಯಗೊಂಡ ಚೇತನ್ ಅವರನ್ನು ಆಸ್ಪತ್ರೆಗೆ ಸೇರಿಸಲು ಆ್ಯಂಬುಲೆನ್ ಬರುವಷ್ಟರಲ್ಲಿ ಕೊನೆಯುಸಿರೆಳೆದಿದ್ದಾನೆ. ಆತನ ಸ್ನೇಹತನ ಸ್ಥಿತಿ ಕೂಡ ಚಿಂತಾಜನಕವಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.ಚನ್ನರಾಯಪಟ್ಟಣ ಗ್ರಾಮಾಂತರ ಠಾಣೆ ಪೊಲೀಸರು ಪ್ರಕರಣ ದಾಖಲಿಸಿಕೊಂಡು ಮುಂದಿನ ಕ್ರಮ ಕೈಗೊಂಡಿದ್ದಾರೆ.
< Eesanje News 24/7 ನ್ಯೂಸ್ ಆ್ಯಪ್ >
Click Here to Download : Android / iOS
Facebook Comments