ಕಾವೇರಿ ವಿಚಾರಣೆ ಹಿನ್ನೆಲೆಯಲ್ಲಿ ಬೆಂಗಳೂರಿನಲ್ಲಿ ನಿಷೇಧಾಜ್ಞೆ ಮುಂದುವರಿಕೆ
ಬೆಂಗಳೂರು, ಸೆ.30– ಕಾವೇರಿ ನದಿನೀರು ಹಂಚಿಕೆ ವಿವಾದ ಇಂದು ಸುಪ್ರೀಂಕೋರ್ಟ್ನಲ್ಲಿ ವಿಚಾರಣೆ ನಡೆಯುವ ಹಿನ್ನೆಲೆಯಲ್ಲಿ ರಾಜಧಾನಿ ಬೆಂಗಳೂರಿನಲ್ಲಿ ನಿಷೇಧಾಜ್ಞೆ ಮುಂದುವರಿಸಲಾಗಿದೆ. ಬೆಳಗ್ಗೆ 6 ಗಂಟೆಯಿಂದ ಮಧ್ಯರಾತ್ರಿ 1 ಗಂಟೆವರೆಗೆ ನಿಷೇಧಾಜ್ಞೆ ಜಾರಿ ಮಾಡಲಾಗಿದೆ. ಭದ್ರತೆಗಾಗಿ 14 ಅರೆಸೇನಾ ಪಡೆಗಳನ್ನು ನಗರದಾದ್ಯಂತ ನಿಯೋಜಿಸಲಾಗಿದೆ. ಬಿಎಸ್ಎಫ್, ಆರ್ಎಎಫ್, ಸಿಐಎಸ್ಎಫ್, ಎಸ್ಎಸ್ಎಫ್, ಐಟಿಬಿಪಿ ಪಡೆಗಳನ್ನು ವಿವಿಧೆಡೆ ನಿಯೋಜಿಸಲಾಗಿದೆ. 40 ಕೆಎಸ್ಆರ್ಪಿ ತುಕಡಿ, 30 ಸಿಎಆರ್ ತುಕಡಿ ಹಾಗೂ ಆಯಾ ವಿಭಾಗಗಳಲ್ಲಿ ಡಿಸಿಪಿ ನೇತೃತ್ವದಲ್ಲಿ ಸಿವಿಲ್ ಪೊಲೀಸರನ್ನು ಭದ್ರತೆಗೆ ನಿಯೋಜಿಸಲಾಗಿದೆ ಎಂದು ನಗರ ಪೆÇಲೀಸ್ ಆಯುಕ್ತ ಮೇಘರಿಕ್ ತಿಳಿಸಿದ್ದಾರೆ. ಯಾವುದೇ ಅಹಿತಕರ ಘಟನೆಗಳು ನಡೆಯದಂತೆ ಅಗತ್ಯ ಮುನ್ನೆಚ್ಚರಿಕೆ ಕ್ರಮ ಕೈಗೊಳ್ಳಲಾಗಿದೆ.