ಕಾಶ್ಮೀರದಲ್ಲಿ ಪರಿಸ್ಥಿತಿ ಉದ್ವಿಗ್ನ : ರಾಜನಾಥ್ದೋ ಸಿಂಗ್ ಜೊತೆ ಅಜಿತ್ ದೋವೆಲ್ ಚರ್ಚೆ

Spread the love

Jammu-Kashmir--01

ಶ್ರೀನಗರ, ಏ.18– ಪ್ರತಿಭಟನಾನಿರತ ಯುವಕನನ್ನು ಸೇನಾ ಯೋಧರು ತಮ್ಮ ವಾಹನದ ಮುಂಭಾಗಕ್ಕೆ ಕಟ್ಟಿ ರಸ್ತೆಯಲ್ಲಿ ಮೆರವಣಿಗೆ ನಡೆಸಿದ ಪ್ರಕರಣದ ಹಿನ್ನೆಲೆಯಲ್ಲಿ ಕಣಿವೆ ರಾಜ್ಯ ಜಮ್ಮು-ಕಾಶ್ಮೀರವು ಇಂದು ಕೂಡ ಪ್ರಕ್ಷುಬ್ಧ ಪರಿಸ್ಥಿತಿಯಲ್ಲಿದೆ. ಯಥ ಪ್ರಕಾರ ಪ್ರತಿಭಟನಾಕಾರರು ರೊಚ್ಚಿಗೆದ್ದು ವಿಧ್ವಂಸಕ ಕೃತ್ಯಗಳಲ್ಲಿ ತೊಡಗಿದ್ದು ಪರಿಸ್ಥಿತಿಯನ್ನು ಸಹಜಸ್ಥಿತಿಗೆ ತರಲು ಸಶಸ್ತ್ರ ಪಡೆ ಯೋಧರು ಇನ್ನಿಲ್ಲದ ಪರಿಶ್ರಮ ಪಡುತ್ತಿದ್ದಾರೆ.  ಈ ಮಧ್ಯೆ ಕೇಂದ್ರ ಗೃಹ ಸಚಿವ ರಾಜನಾಥ್ ಸಿಂಗ್ ಅವರು ರಾಷ್ಟ್ರೀಯ ಭದ್ರತಾ ಸಲಹೆಗಾರ ಅಜಿತ್ ದೋವೆಲ್ ಅವರೊಂದಿಗೆ ಸಭೆ ನಡೆಸಿ ಕಣಿವೆ ರಾಜ್ಯದ ಸ್ಥಿತಿಗತಿಗಳ ಬಗ್ಗೆ ಮಾಹಿತಿ ಪಡೆದಿದ್ದಾರೆ.ಏ.9ರಂದು ಶ್ರೀನಗರ ಲೋಕಸಭಾ ಚುನಾವಣೆ ಮತದಾನದ ವೇಳೆ ಭುಗಿಲೆದ್ದ ಹಿಂಸಾಚಾರಕ್ಕೆ 8 ಮಂದಿ ಬಲಿಯಾಗಿದ್ದರು. ಇನ್ನೂ ಕೂಡ ಪರಿಸ್ಥಿತಿ ಉದ್ವಿಗ್ನವಾಗಿಯೇ ಮುಂದುವರೆದಿದೆ.

< Eesanje News 24/7 ನ್ಯೂಸ್ ಆ್ಯಪ್  >

 Click Here to Download  :  Android / iOS  

Sri Raghav

Admin