ಕಾಶ್ಮೀರದಲ್ಲಿ ಪಾಕ್ ಸೇನೆಯಿಂದ ಅಪ್ರಚೋದಿತ ಗುಂಡಿನ ದಾಳಿ

Firing--01

ಜಮ್ಮು, ಆ.30- ಕಾಶ್ಮೀರ ಕಣಿವೆಯ ಗಡಿ ಭಾಗದಲ್ಲಿ ಪಾಕಿಸ್ತಾನ ಸೇನಾಪಡೆ ಮತ್ತೆ ಕ್ಯಾತೆ ತೆಗೆದಿದೆ. ಜಮ್ಮು ಮತ್ತು ಕಾಶ್ಮೀರದ ರಜೌರಿ ಜಿಲ್ಲೆಯ ಮುಂಚೂಣಿ ಸೇನಾ ನೆಲೆಗಳು ಮತ್ತು ಗ್ರಾಮಗಳ ಮೇಲೆ ಪಾಕ್ ಯೋಧರು ಕದನ ವಿರಾಮ ಉಲ್ಲಂಘಿಸಿ ಅಪ್ರಚೋದಿತ ಗುಂಡಿನ ದಾಳಿ ನಡೆಸಿದ್ದಾರೆ.  ಗಡಿ ನಿಯಂತ್ರಣ ರೇಖೆಯಲ್ಲಿ (ಎಲ್‍ಒಸಿ) ಪಹರೆಯಲ್ಲಿದ್ದ ಭಾರತೀಯ ಯೋಧರು ಪ್ರತ್ಯುತ್ತರ ನೀಡಿದಾಗ ಎರಡು ಪಡೆಗಳ ಮಧ್ಯೆ ಕೆಲಕಾಲ ಗುಂಡಿನ ಚಕಮಕಿ ನಡೆಯಿತು ಎಂದು ಹಿರಿಯ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.  ರಜೌರಿ ಜಿಲ್ಲೆಯ ನೌಶೇರಾ ವಲಯದಲ್ಲಿ ಇಂದು ಬೆಳಗ್ಗೆ 10.35ರಲ್ಲಿ ಪಾಕಿಸ್ತಾನಿ ಸೇನಾಪಡೆಗಳು ಕದನ ವಿರಾಮ ಉಲ್ಲಂಘಿಸಿ ಅಪ್ರಚೋದಿತ ದಾಳಿ ನಡೆಸಿವೆ. ಸಾವು-ನೋವಿನ ಬಗ್ಗೆ ವರದಿಯಾಗಲಿಲ್ಲ.

Sri Raghav

Admin