ಕಾಶ್ಮೀರದ ರಿಯಾಸಿ ಜಿಲ್ಲೆಯಲ್ಲಿ ಬಸ್ ಕಂದಕ್ಕೆ ಉರುಳಿ 21 ಮಂದಿ ಸಾವು
ಜಮ್ಮು, ಅ.21- ಬಸ್ಸೊಂದು ಕಂದಕಕ್ಕೆ ಉರುಳಿ ಕನಿಷ್ಠ 21 ಮಂದಿ ಮೃತಪಟ್ಟ, ಇತರ 24 ಜನ ಗಾಯಗೊಂಡಿರುವ ಘಟನೆ ಜಮ್ಮು ಮತ್ತು ಕಾಶ್ಮೀರದ ರಿಯಾಸಿ ಜಿಲ್ಲೆಯಲ್ಲಿ ನಿನ್ನೆ ರಾತ್ರಿ ಸಂಭವಿಸಿದೆ. ರಿಯಾಸಿಯಿಂದ ಬಕ್ಕೆಲ್ಗೆ 45 ಪ್ರಯಾಣಿಕರನ್ನು ಹೊತ್ತೊಯ್ಯುತ್ತಿದ್ದ ಬಸ್ ಆಳವಾದ ಕಮರಿಗೆ ಉರುಳಿ ಬಿತ್ತು. ಈ ದುರ್ಘಟನೆಯಲ್ಲಿ 21 ಮಂದಿ ಸಾವಿಗೀಡಾಗಿ, 24 ಜನರಿಗೆ ಗಾಯಗಳಾಗಿವೆ ಎಂದು ರಿಯಾಸಿ ಪೆÇಲೀಸ್ ವರಿಷ್ಠಾಧಿಕಾರಿ ತಾಹೀರ್ ಸಜಾದ್ ಭಟ್ ಹೇಳಿದ್ದಾರೆ. ತೀವ್ರ ಗಾಯಗೊಂಡವರನ್ನು ಹೆಲಿಕಾಪ್ಟರ್ ಮೂಲಕ ಜಮ್ಮುವಿನ ಸರ್ಕಾರಿ ವೈದ್ಯಕೀಯ ಕಾಲೇಜು ಮತ್ತು ಆಸ್ಪತ್ರೆಗೆ ಸೇರಿಸಲಾಗಿದೆ. ಸ್ಥಳೀಯ ನಿವಾಸಿಗಳ ನೆರವಿನೊಂದಿಗೆ ಪೆÇಲೀಸರು ಮತ್ತು ಜಿಲ್ಲಾಡಳಿತ ಜಂಟಿ ರಕ್ಷಣಾ ಕಾರ್ಯಾಚರಣೆ ಕೈಗೊಂಡಿತು ಎಂದು ಅವರು ತಿಳಿಸಿದ್ದಾರೆ.
ಈ ದುರಂತದ ಬಗ್ಗೆ ಪ್ರಧಾನಿ ನರೇಂದ್ರ ಮೋದಿ ಹಾಗೂ ಜಮ್ಮು ಮತ್ತು ಕಾಶ್ಮೀರದ ಮುಖ್ಯಮಂತ್ರಿ ಮುಫ್ತಿ ಮೆಹಬೂಬಾ ದಿಗ್ಭ್ರಮೆ ವ್ಯಕ್ತಪಡಿಸಿದ್ದಾರೆ. ಅಪಘಾತಕ್ಕೆ ಕಾರಣವಾದ ಘಟನೆ ಬಗ್ಗೆ ಪೆÇಲೀಸ್ ವರಿಷ್ಠಾಧಿಕಾರಿ ತನಿಖೆಗೆ ಆದೇಶಿಸಿದ್ದಾರೆ.