ಕಿಡಿಗೇಡಿಗಳಿಂದ ಸರ್ಕಾರಿ ಹಿರಿಯ ಪ್ರಾಥಮಿಕ ಪಾಠ ಶಾಲೆ ಕಾಂಪೌಂಡ್ ಧ್ವಂಸ

Spread the love

govt-school

ತುರುವೇಕೆರೆ, ಫೆ.27- ತಾಲೂಕಿನ ಮಾಯಸಂದ್ರ ಗ್ರಾಮದ ಸರ್ಕಾರಿ ಹಿರಿಯ ಪ್ರಾಥಮಿಕ ಪಾಠ ಶಾಲೆ ಕಾಂಪೌಂಡನ್ನು ಕಿಡಿಗೇಡಿಗಳು ಒಡೆದು ಹಾಕಿದ್ದು ಸಾರ್ವಜನಿಕರಲ್ಲಿ ತೀವ್ರ ಚರ್ಚೆಗೆ ಗ್ರಾಸವಾಗಿದೆ. ಮಾಯಸಂದ್ರ ಗ್ರಾಮದ ಸರ್ಕಾರಿ ಹಿರಿಯ ಪ್ರಾಥಮಿಕ ಪಾಠ ಶಾಲೆಯ 3 ಎಕರೆ ವಿಸ್ತೀರ್ಣ ಹೊಂದಿದ್ದು ಸುತ್ತಲು ಕಾಂಪೌಂಡ್ ನಿರ್ಮಿಸಲಾಗಿದೆ. ಶನಿವಾರ ರಾತ್ರಿ ಸಮಯದಲ್ಲಿ ಮಾವಿನಕೆರೆ ರಸ್ತೆಗೆ ಹೊಂದಿಕೊಂಡಂತೆ ಸುಮಾರು 8 ಆಡಿಗಳಷ್ಟು ಒಡೆದು ಹಾಕಲಾಗಿದೆ. ಈಗಾಗಲೇ ಶಾಲೆಗೆ ತೆರಳಲು ದೊಡ್ಡದಾದ ಗೇಟ್ ಹೊಂದಿದ್ದರೂ ಮಗುಲಲ್ಲೇ ಗೋಡೆ ಒಡೆಯಲಾಗಿದ್ದು ಇದು ಕಿಡಿಗೇಡಿಗಳ ಕೃತ್ಯ ಎಂದು ಗ್ರಾಮಸ್ಥರು ಹಾಗೂ ಸಾರ್ವಜನಿಕರು ಪಟ್ಟಣದ ಪೊಲೀಸ್ ಠಾಣೆಯಲ್ಲಿ ದೂರು ನೀಡಿದ್ದಾರೆ.
ಈ ಪ್ರಕರಣ ಸಂಬಂಧ ಪಿಎಸ್‍ಐ ಹೊನ್ನೇಗೌಡ ಭೇಟಿ ನೀಡಿ ಪರಿಶೀಲಿಸಿ ಪ್ರಕರಣ ದಾಖಲಿಸಿಕೊಂಡು ತನಿಖೆ ಮುಂದುವರೆಸಿದ್ದಾರೆ.

< Eesanje News 24/7 ನ್ಯೂಸ್ ಆ್ಯಪ್  >

 Click Here to Download  :  Android / iOS  

Facebook Comments

Sri Raghav

Admin