ಕೂಲಿ ವಿಚಾರವಾಗಿ ಜಗಳ, ಮಾರಕಾಸ್ತ್ರಗಳಿಂದ ಕೊಚ್ಚಿ ಪತ್ನಿಯನ್ನು ಕೊಂದ ಪತಿ
ಬಾಗಲಕೋಟೆ, ಏ.20– ಕೂಲಿ ವಿಚಾರಕ್ಕೆ ಪತಿಯೇ ಪತ್ನಿಯನ್ನು ಮಾರಕಾಸ್ತ್ರಗಳಿಂದ ಕೊಚ್ಚಿ ಕೊಲೆ ಮಾಡಿರುವ ಘಟನೆ ಜಮಖಂಡಿ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ನಡೆದಿದೆ. ಅಲಗೂರು ಗ್ರಾಮದ ನಿವಾಸಿ ಮಾಲಾ(25) ಕೊಲೆಯಾದ ಪತ್ನಿ. ಮಾಲಾ ಹಾಗೂ ಸದಾಶಿವ ದಂಪತಿ ಕೂಲಿ ಕೆಲಸ ಮಾಡಿ ಜೀವನ ಸಾಗಿಸುತ್ತಿದ್ದು, ಕೂಲಿ ವಿಚಾರವಾಗಿ ಇಬ್ಬರ ಮಧ್ಯೆ ಜಗಳ ನಡೆದು, ಜಗಳ ವಿಕೋಪಕ್ಕೆ ತಿರುಗಿದೆ. ಒಂದು ಹಂತದಲ್ಲಿ ಸದಾಶಿವ ಮಾರಕಾಸ್ತ್ರಗಳಿಂದ ಪತ್ನಿಯನ್ನು ಕೊಚ್ಚಿ ಕೊಲೆ ಮಾಡಿದ್ದಾನೆ ಎನ್ನಲಾಗಿದೆ. ಸುದ್ದಿ ತಿಳಿದ ಜಮಖಂಡಿ vಲೀಸರು ಸ್ಥಳಕ್ಕಾಗಮಿಸಿ ಪರಿಶೀಲಿಸಿ ಆರೋಪಿ ಸದಾಶಿವನನ್ನು ಬಂಧಿಸಿ ಮುಂದಿನ ಕ್ರಮ ಕೈಗೊಂಡಿದ್ದಾರೆ.
< Eesanje News 24/7 ನ್ಯೂಸ್ ಆ್ಯಪ್ >