ಕೃಷ್ಣ ನಿರ್ಧಾರ ಬೆಂಬಲಿಸಿ ರಾಜೀನಾಮೆ

Spread the love

KR--PETE

ಕೆ.ಆರ್.ಪೇಟೆ, ಫೆ.3- ಮಾಜಿ ಮುಖ್ಯಮಂತ್ರಿ ಎಸ್.ಎಂ.ಕೃಷ್ಣ ಅವರ ರಾಜಕೀಯ ನಿರ್ಧಾರವನ್ನು ಬೆಂಬಲಿಸಿ ತಾಲೂಕಿನ ಹಿರಿಯ ಕಾಂಗ್ರೆಸ್ ಮುಖಂಡ, ಬೇಲದಕೆರೆ ಪಾಪೇಗೌಡ ಸೇರಿದಂತೆ ಹಲವರು ತಮ್ಮ ಹಲವು ಬೆಂಬಲಿಗರೊಂದಿಗೆ ಕಾಂಗ್ರೆಸ್ ಪಕ್ಷದ ಪ್ರಾಥಮಿಕ ಸದಸ್ಯತ್ವಕ್ಕೆ ರಾಜೀನಾಮೆ ನೀಡಿದ್ದಾರೆ.ತಾಪಂ ಮಾಜಿ ಸದಸ್ಯರಾದ ಆನೆಗೊಳದ ಬಾಲಚಂದ್ರ, ತಾ.ಪಂ. ಮಾಜಿ ಸದಸ್ಯ ಬಿಲ್ಲೇನಹಳ್ಳಿ ಕುಮಾರ್, ಗ್ರಾಪಂ ಮಾಜಿ ಅಧ್ಯಕ್ಷ ಕುಮಾರಸ್ವಾಮಿ, ಯುವ ಕಾಂಗ್ರೆಸ್ ಅಧ್ಯಕ್ಷ ಗೊರವಿಕುಮಾರ್, ಮುಖಂಡರಾದ ಪರಮೇಶ್ ಸೇರಿದಂತೆ ಮುಖಂಡರು ಸಾಮೂಹಿಕವಾಗಿ ಕಾಂಗ್ರೆಸ್ ಪಕ್ಷದ ಪ್ರಾಥಮಿಕ ಸದಸ್ಯತ್ವಕ್ಕೆ ಸಾಮೂಹಿಕ ರಾಜೀನಾಮೆ ಸಲ್ಲಿಸಿದ್ದಾರೆ.

ದೇಶ ಕಂಡ ಅಪರೂಪದ ರಾಜಕೀಯ ಮುತ್ಸದ್ಧಿಗಳಾದ ಮಾಜಿ ಮುಖ್ಯಮಂತ್ರಿ ಎಸ್.ಎಂ.ಕೃಷ್ಣ ಅವರನ್ನು ರಾಜ್ಯ ಹಾಗೂ ರಾಷ್ಟ್ರದ ಕಾಂಗ್ರೆಸ್ ಮುಖಂಡರು ಕಡೆಗಣಿಸುತ್ತಿದ್ದಾರೆ ಎಂದು ಪಾಪೇಗೌಡ ಆರೋಪಿಸಿದರು.ಕಾಂಗ್ರೆಸ್ ಪಕ್ಷದ ನಿಷ್ಠಾವಂತ ಕಾರ್ಯಕರ್ತರಾದ ನಾವುಗಳು ಹಿರಿಯ ಮುಖಂಡರಾದ ಎಸ್.ಎಂ.ಕೃಷ್ಣ ಅವರನ್ನು ಬೆಂಬಲಿಸಿ ಕಾಂಗ್ರೆಸ್ ಪಕ್ಷಕ್ಕೆ ಗುಡ್ ಬೈ ಹೇಳುತ್ತಿದ್ದೇವೆ ಎಂದು ಆಕ್ರೋಶ ವ್ಯಕ್ತಪಡಿಸಿದರಲ್ಲದೆ ಎಸ್.ಎಂ.ಕೆ.ಅವರು ತೆಗೆದುಕೊಳ್ಳುವ ನಿರ್ಧಾರಕ್ಕೆ ಬದ್ದವಾಗಿರುತ್ತೇವೆ ಎಂದರು.

< Eesanje News 24/7 ನ್ಯೂಸ್ ಆ್ಯಪ್  >

 Click Here to Download  :  Android / iOS

Sri Raghav

Admin