ಕೆಪಿಎಸ್ಸಿಯಲ್ಲಿ ಎಸ್’ಡಿಎ, ಎಫ್ ಡಿಎ ಹುದ್ದೆಗಳ ನೇಮಕಾತಿಗೆ ಅರ್ಜಿಆಹ್ವಾನ
ಕರ್ನಾಟಕ ಸರ್ಕಾರದ ವಿವಿಧ ಇಲಾಖೆಗಳಲ್ಲಿರುವ ಪ್ರಥಮ ದರ್ಜೆ ಸಹಾಯಕರ ಮತ್ತು ದ್ವಿತೀಯ ದರ್ಜೆ ಸಹಾಯಕರ ಹುದ್ದೆಗಳಿಗೆ ಕೆಪಿಎಸ್ಸಿ ಅರ್ಜಿ ಆಹ್ವಾನಿಸಿದ್ದು ಆನ್ಲೈನ್ ಮೂಲಕ ಅರ್ಜಿ ಸಲ್ಲಿಸಲು 04-01-2017 ಕೊನೆಯ ದಿನವಾಗಿರುತ್ತದೆ. ಡಿಸೆಂಬರ್ 6ರಿಂದ ಆನ್ ಲೈನ್ ಮೂಲಕ ಅರ್ಜಿ ಸಲ್ಲಿಸಬಹುದಾಗಿದೆ. ಕೊನೆ ದಿನ ಜನವರಿ 4, ರಾತ್ರಿ 11.45. ಪರೀಕ್ಷಾ ಶುಲ್ಕವನ್ನು ಅಂಚೆ ಕಚೇರಿಯಲ್ಲಿ ಪಾವತಿಸುವುದಕ್ಕೆ ಜನವರಿ 5 ಕೊನೆ ದಿನ. ಇ ಪೇಮೆಂಟ್ ಮಾಡುವುದಿದ್ದರೆ ಜನವರಿ 5ರ ರಾತ್ರಿ 11.45ರವರೆಗೆ ಅವಕಾಶ ಇದೆ. ಅರ್ಜಿಗಳನ್ನು ಆನ್ ಲೈನ್ ಮೂಲಕ ಭರ್ತಿ ಮಾಡಿ, ಪರೀಕ್ಷಾ ಶುಲ್ಕವನ್ನು ರಾಜ್ಯದ ಯಾವುದೇ ಎಲೆಕ್ಟ್ರಾನಿಕ್ ಅಂಚೆ ಕಚೇರಿಯಲ್ಲಿ ಪಾವತಿಸಬಹುದು. ಕ್ರೆಡಿಟ್, ಡೆಬಿಟ್ ಕಾರ್ಡ್ ಅಥವಾ ನೆಟ್ ಬ್ಯಾಂಕಿಂಗ್ ಮೂಲಕವೂ ಪಾವತಿ ಮಾಡಬಹುದಾಗಿದೆ.
> ಯಾವ ಸುದ್ದಿಯನ್ನೂ ಮಿಸ್ ಮಾಡ್ಕೋಬೇಡಿ… : Eesanje News 24/7 ನ್ಯೂಸ್ ಆ್ಯಪ್ – Click Here to Download