ಕೆಪಿಸಿಸಿ ಅಧ್ಯಕ್ಷರ ಬದಲಾವಣೆ ಊಹಾಪೋಹ ಅಷ್ಟೇ
ಬೆಂಗಳೂರು, ಏ.16- ಕೆಪಿಸಿಸಿ ಅಧ್ಯಕ್ಷರ ಬದಲಾವಣೆಗೆ ಸಂಬಂಧಿಸಿದಂತೆ ಹೈಕಮಾಂಡ್ ಸೂಕ್ತ ಸಂದರ್ಭದಲ್ಲಿ ತೀರ್ಮಾನ ಕೈಗೊಳ್ಳಲಿದೆ ಎಂದು ಕೆಪಿಸಿಸಿ ಕಾರ್ಯಾಧ್ಯಕ್ಷ ದಿನೇಶ್ಗುಂಡೂರಾವ್ ತಿಳಿಸಿದ್ದಾರೆ. ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಕೆಪಿಸಿಸಿ ಅಧ್ಯಕ್ಷರ ಬದಲಾವಣೆ ಬಗ್ಗೆ ಹೈಕಮಾಂಡ್ನೊಂದಿಗೆ ಈಗಾಗಲೇ ಚರ್ಚೆಯಾಗಿದೆ. ಆದರೆ, ಯಾರಾಗಲಿದೆ ಎಂಬುದು ಇನ್ನೂ ನಿರ್ಧಾರವಾಗಿಲ್ಲ.
ಹಾಲಿ ಅಧ್ಯಕ್ಷರಾಗಿರುವ ಪರಮೇಶ್ವರ್ ಅವರನ್ನೇ ಮುಂದುವರೆಸಲಾಗುತ್ತದೆ, ಇಲ್ಲವೇ ಬದಲಾವಣೆ ಮಾಡಿ ಸಚಿವರಾದ ಡಿ.ಕೆ.ಶಿವಕುಮಾರ್ ಮತ್ತು ಎಂ.ಬಿ.ಪಾಟೀಲ್ ಅವರು ಕೆಪಿಸಿಸಿ ಅಧ್ಯಕ್ಷರಾಗಲಿದ್ದಾರೆ ಎಂಬುದು ಊಹಾಪೋಹ ಎಂದು ತಳ್ಳಿ ಹಾಕಿದರು.
< Eesanje News 24/7 ನ್ಯೂಸ್ ಆ್ಯಪ್ >