ಕೇಂದ್ರ ಸರ್ಕಾರವನ್ನು ತೀವ್ರ ತರಾಟೆ ತೆಗೆದುಕೊಂಡ ಸುಪ್ರೀಂ ಸಿಜೆ ಸಿ.ಎಸ್. ಠಾಕೂರ್

Spread the love

Supreme-Court-CJ

ನವದೆಹಲಿ, ಅ.28– ಸುಪ್ರೀಂ ಕೋರ್ಟ್ ಮತ್ತು ಹೈಕೋರ್ಟ್‍ಗಳ ನ್ಯಾಯಾಧೀಶರ ನೇಮಕಾತಿ ವಿಷಯದಲ್ಲಿ ಕೇಂದ್ರ ಸರ್ಕಾರ ಅನುಸರಿಸುತ್ತಿರುವ ಧೋರಣೆಯನ್ನು ಸುಪ್ರೀಂ ಕೋರ್ಟ್ ಮುಖ್ಯ ನ್ಯಾಯಮೂರ್ತಿ ಸಿ.ಎಸ್. ಠಾಕೂರ್ ತೀವ್ರ ತರಾಟೆಗೆ ತೆಗೆದುಕೊಂಡಿದ್ದಾರೆ. ಕೊಲಿಜಿಯಂ (ನ್ಯಾಯಾಧೀಶರ ಮಂಡಳಿ) ಈ ಸಂಬಂಧ ಶಿಫಾರಸುಗಳನ್ನು ಮಾಡಿದ್ದರೂ ಕೂಡ
ನ್ಯಾಯಾಧೀಶರುಗಳನ್ನು ನೇಮಕ ಮಾಡಲು ಕೇಂದ್ರ ಸರ್ಕಾರ ಅನುಸರಿಸುತ್ತಿರುವ ವಿಳಂಬ ನೀತಿಗೆ ಸುಪ್ರೀಂ ಕೋರ್ಟ್ ತೀವ್ರ ಆಕ್ಷೇಪ ವ್ಯಕ್ತಪಡಿಸಿದ್ದಾರೆ. ಈ ಕುರಿತು ಸಲ್ಲಿಸಲಾಗಿದ್ದ ಮನವಿಯನ್ನು ಪರಿಶೀಲಿಸಿದ ಮುಖ್ಯ ನ್ಯಾಯಮೂರ್ತಿ ಅವರ ನೇತೃತ್ವದ ಪೀಠವು ಕೇಂದ್ರ ಸರ್ಕಾರದ ನಡೆಯ ವಿಳಂಬ ನೀತಿಯನ್ನು ತೀವ್ರವಾಗಿ ತರಾಟೆಗೆ ತೆಗೆದುಕೊಂಡಿದೆ.

ಕೇಂದ್ರ ಸರ್ಕಾರದ ಧೋರಣೆಯಿಂದಾಗಿ ನ್ಯಾಯಾಂಗವೇ ನಾಗರಿಕರಿಗೆ ಬಾಗಿಲು ಮುಚ್ಚುವಂತಾಗಿದೆ. ಯಾವುದೇ ಕಾರಣಕ್ಕೂ ವ್ಯವಸ್ಥೆ ಕುಸಿಯುವಂತೆ ಆಗಬಾರದು. ಈ ವಿಷಯದಲ್ಲಿ ನಾವು ನಿಮ್ಮೊಂದಿಗೆ ಸಂಘರ್ಷಕ್ಕೆ ಇಳಿಯಲು ಆಗುವುದಿಲ್ಲ. ಆದರೆ ಈ ರೀತಿ ನಿಮ್ಮ ವರ್ತನೆ ಮುಂದುವರೆದರೆ ಇಡೀ ನ್ಯಾಯಾಂಗ ವ್ಯವಸ್ಥೆ ಮೇಲೆ ಪ್ರತಿಕೂಲ ಪರಿಣಾಮ ಬೀರುತ್ತದೆ ಎಂದು ಅವರು ಟೀಕಿಸಿದರು. ಇದೇ ವೇಳೆ ಕರ್ನಾಟಕದ ಹೈಕೋರ್ಟ್‍ನಲ್ಲೂ ಕೂಡ ನ್ಯಾಯಾಧೀಶರ ಕೊರತೆಯಿಂದಾಗಿ ನ್ಯಾಯಾಲಯದ ಕೊಠಡಿಗಳಿಗೆ ಬೀಗ ಹಾಕುವಂತಾಗಿದೆ ಎಂದು ತೀವ್ರ ಅಸಮಾಧಾನ ವ್ಯಕ್ತಪಡಿಸಿದ್ದಾರೆ.

► Follow us on –  Facebook / Twitter  / Google+

Facebook Comments

Sri Raghav

Admin