ಕೇರಳದಲ್ಲಿ 10 ಸಿಪಿಎಂ ಕಾರ್ಯಕರ್ತರಿಗೆ ಇರಿತ : ನಾಲ್ವರು ಗಂಭೀರ

Spread the love

Stabed-c

ತಾನೂರು, ಫೆ.7-ಕೇರಳದ ಮಲಪ್ಪುರಂ ತಾಲ್ಲೂಕಿನ ತಾನೂರಿನಲ್ಲಿ 10ಕ್ಕೂ ಹೆಚ್ಚು ಭಾರತ ಕಮ್ಯೂನಿಸ್ಟ್ ಪಕ್ಷದ (ಮಾರ್ಕ್ಸ್ ವಾದಿ) ಕಾರ್ಯಕರ್ತರಿಗೆ ದುಷ್ಕರ್ಮಿಗಳು ಇರಿದು ಪರಾರಿಯಾಗಿರುವ ಘಟನೆ ನಡೆದಿದೆ. ಈ ಕೃತ್ಯವನ್ನು ಖಂಡಿಸಿ ನಿರಮರತೂರ್ ಪಂಚಾಯಿತಿಯಲ್ಲಿ ಸಿಪಿಎಂ ಕಾರ್ಯಕರ್ತರು ಪ್ರತಿಭಟನಾ ಧರಣಿ ನಡೆಸಿದರು.   ಗಾಯಾಳುಗಳನ್ನು ಕಲ್ಲಿಕೋಟೆ ಮೆಡಿಕಲ್ ಕಾಲೇಜು ಆಸ್ಪತ್ರೆಗೆ ದಾಖಲಿಸಲಾಗಿದ್ದು, ನಾಲ್ವರ ಸ್ಥಿತಿ ಚಿಂತಾಜನಕವಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.  ಮೈದಾನದಲ್ಲಿ ನಿದ್ರಿಸುತ್ತಿದ್ದ ಸಿಪಿಎಂ ಕಾರ್ಯಕರ್ತರ ಗುಂಪಿನ ಮೇಲೆ ಹಠಾತ್ ದಾಳಿ ನಡೆಸಿದ ದುಷ್ಕರ್ಮಿಗಳು ಅವರು ಎಚ್ಚೆತ್ತುಕೊಳ್ಳುವ ಮುನ್ನವೇ ಮಾರಕಾಸ್ತ್ರಗಳಿಂದ ಇರಿದು ಪರಾರಿಯಾಗಿದ್ದಾರೆ ಎಂದು ಹಿರಿಯ ಪೊಲೀಸ್ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.

ಈ ಕೃತ್ಯದ ಹಿಂದೆ ಮುಸ್ಲಿಂ ಲೀಗ್ ಕೈವಾಡ ಇದೆ ಎಂದು ಸಿಪಿಎಂ ಆರೋಪಿಸಿದೆ. ಈ ಪ್ರದೇಶದಲ್ಲಿ ಉದ್ವಿಗ್ನ ಸ್ಥಿತಿ ನೆಲೆಸಿದ್ದು ಮುನ್ನೆಚ್ಚರಿಕೆ ಕ್ರಮವಾಗಿ ವ್ಯಾಪಕ ಬಂದೋಬಸ್ತ್ ಮಾಡಲಾಗಿದೆ.

< Eesanje News 24/7 ನ್ಯೂಸ್ ಆ್ಯಪ್  >

 Click Here to Download  :  Android / iOS  

Sri Raghav

Admin