ಕೋಲಾರದಲ್ಲಿ ಉರುಸ್ ಮೆರವಣಿಗೆ ವೇಳೆ ಎರಡು ಗುಂಪಿನ ನಡುವೆ ಮಾರಾಮಾರಿ

Kolar-Urus

ಕೋಲಾರ, ಮಾ.30- ಉರುಸ್ ಮೆರವಣಿಗೆ ವೇಳೆ ಹಣಕಾಸಿನ ವಿಚಾರವಾಗಿ ಎರಡು ಗುಂಪಿನ ನಡುವೆ ಜಗಳವಾಗಿ 12 ಜನ ಗಾಯಗೊಂಡಿದ್ದು, ಒಂದು ಗುಂಪು ಆಸ್ಪತ್ರೆಗೂ ನುಗ್ಗಿ ದಾಂಧಲೆ ನಡೆಸಿರುವ ಘಟನೆ ರಾತ್ರಿ ನಗರದಲ್ಲಿ ನಡೆದಿದೆ. ನಗರದ ಕ್ಲಾಕ್ ಟವರ್ ಭಾಗದಲ್ಲಿ ರಾತ್ರಿ ಉರುಸ್ ಮೆರವಣಿಗೆ ನಡೆಯುತ್ತಿತ್ತು. ಈ ವೇಳೆ ಲೇವಾದೇವಿ ವ್ಯವಹಾರ ನಡೆದಿದ್ದು, ಎರಡು ಗುಂಪುಗಳ ನಡುವೆ ಜಗಳ ನಡೆದಿದೆ. ಎರಡು ಗುಂಪಿನವರು ಬ್ಲೇಡ್ ಹಿಡಿದು ಪರಸ್ಪರ ಮಾರಾಮಾರಿ ನಡೆಸಿದ್ದು, 12 ಜನ ಗಾಯಗೊಂಡಿದ್ದಾರೆ.

ಗಾಯಾಳುಗಳ ಪೈಕಿ ಆರು ಜನ ಎಸ್‍ಎನ್‍ಆರ್ ಆಸ್ಪತ್ರೆಗೆ ದಾಖಲಾಗಿದ್ದು, ಅಲ್ಲಿಗೂ ನುಗ್ಗಿದ ಗುಂಪು ಆಸ್ಪತ್ರೆ ಪೀಠೋಪಕರಣಗಳನ್ನು ಧ್ವಂಸಗೊಳಿಸಿ ದಾಂಧಲೆ ನಡೆಸಿದೆ.  ಇನ್ನು ಆರು ಜನ ದೇವರಾಜ ಅರಸು ವೈದ್ಯಕೀಯ ಕಾಲೇಜಿನ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಘಟನೆ ಸಂಬಂಧ ನಗರ ಠಾಣೆ ಪೊಲೀಸರು ಎಂಟು ಜನರನ್ನು ಬಂಧಿಸಿ ಮುಂದಿನ ಕ್ರಮ ಕೈಗೊಂಡಿದ್ದಾರೆ.

< Eesanje News 24/7 ನ್ಯೂಸ್ ಆ್ಯಪ್  >

 Click Here to Download  :  Android / iOS  

Sri Raghav

Admin